Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಸಂಶೋಧನಾ ಪುಸ್ತಕಗಳನ್ನು...

ರಾಯಚೂರು | ಸಂಶೋಧನಾ ಪುಸ್ತಕಗಳನ್ನು ಹೊರತರುವ ಯೋಜನೆಯಡಿ ಪುಸ್ತಕ ಪ್ರಕಟಿಸಲು ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ29 Jan 2025 6:03 PM IST
share
ರಾಯಚೂರು | ಸಂಶೋಧನಾ ಪುಸ್ತಕಗಳನ್ನು ಹೊರತರುವ ಯೋಜನೆಯಡಿ ಪುಸ್ತಕ ಪ್ರಕಟಿಸಲು ಅರ್ಜಿ ಆಹ್ವಾನ

ರಾಯಚೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ನಿರಂತರವಾಗಿ ಈ ಭಾಗದ ಸಾಮಾಜಿಕ ಹಾಗೂ ರಚನಾತ್ಮಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಲವಾರು ಆಯಾಮಗಳ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತರ್‌ ರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ವಾಂಸರಿಂದ ಒಂದು ನೂರು ಪುಸ್ತಕಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಸಿ ಪ್ರಕಟಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಸಮಾಜವನ್ನು ಮತ್ತು ಇತಿಹಾಸವನ್ನು ಎಲ್ಲಾ ಆಯಾಮಗಳಲ್ಲಿ ಅರ್ಥ ಮಾಡಿಕೊಳ್ಳುವುದಕ್ಕೆ ಹಾಗೂ ಕರ್ನಾಟಕ, ಭಾರತ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ವಿದ್ವತ್ತಿನ ಗಂಭೀರ ಚರ್ಚೆಯನ್ನು ತರುವುದಕ್ಕಾಗಿ ವಿಶೇಷ ಯೋಜನೆಯೊಂದನ್ನು ರೂಪಿಸಿದೆ.

ಕಲ್ಯಾಣ ಕರ್ನಾಟಕ ವಿವಿಧ ಮತ ಪಂಥ ಧರ್ಮಗಳ ಸಾಮರಸ್ಯ ಪರಂಪರೆಯಿಂದ ಮೆರೆದು ಜಗತ್ತಿನ ಸಮಾಜಕ್ಕೆ ಪ್ರೇರಣೆಯ ಪ್ರತೀಕವಾಗಿದೆ. ಕಲ್ಯಾಣ ಕರ್ನಾಟಕದ ನೆಲೆ, ಜಲ, ಭಾಷೆ, ಸಾಹಿತ್ಯ, ಸಾಮರಸ್ಯ ಸಂಸ್ಕೃತಿ, ಆಯಾ ಘಟ್ಟದ ಶಾಸನಗಳು, ಶೋಷಿತರ-ಮಹಿಳೆಯರ ಸ್ಥಿತಿಗತಿ, ಪ್ರಾಚೀನ, ಮಧ್ಯಕಾಲಿನ, ಆಧುನಿಕ ರಾಜ್ಯಾಡಳಿತ ಸೇರಿದಂತೆ, ಸಂಸ್ಥಾನಿಕರ ಕಾಲಘಟ್ಟದ ಇತಿಹಾಸ, ಸ್ವಾತಂತ್ರ‍್ಯ ಚಳುವಳಿ, ರಾಜ್ಯಶಾಹಿ ವ್ಯವಸ್ಥೆಯಿಂದ ಪ್ರಜಾಶಾಹಿ ಭಾರತದಲ್ಲಿ ವಿಲೀನಘಟ್ಟ, ಏಕೀಕರಣ ಚಳುವಳಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಘಟ್ಟಗಳು, ಸಾಮಾಜಿಕ ಚಳುವಳಿಗಳು, ಸತ್ಯಶೋಧನಾ ಸಮಿತಿ ವರದಿ, ಫಜಲ್ ಅಲಿ ಆಯೋಗದ ವರದಿ, ಧರ್ಮಸಿಂಗ್ ಸಮಿತಿ ವರದಿ, ಬಚಾವತ್ ಆಯೋಗದ ವರದಿ, ನಂಜುಂಡಪ್ಪ ಆಯೋಗದ ವರದಿಗಳ ಕುರಿತು ಅಧ್ಯಯನ, ಮಾನವ ಅಭಿವೃದ್ಧಿ, ಮಾಧ್ಯಮ, ಪ್ರಾದೇಶಿಕ ಅಸಮತೋಲನೆ, 371 ನೇ ಕಲಂ ಹೋರಾಟ ಮತ್ತು ಅನುಷ್ಠಾನ, ಸಾಧಕ-ಬಾಧಕಗಳು, ಭವಿಷ್ಯದಲ್ಲಿ ಅಭಿವೃದ್ಧಿಪರ ಹಮ್ಮಿಕೊಳ್ಳಬೇಕಾದ ಯೋಜನೆಗಳು, ಕಲ್ಯಾಣ ಕರ್ನಾಟಕದ ಉಡುಗೆ ತೊಡುಗೆ, ಆಹಾರ, ಪರಿಸರ, ಖನಿಜಸಂಪತ್ತು, ಅಲೆಮಾರಿ, ಜಾನಪದ, ತತ್ವಪದ, ನಾಟಕ, ಅರಣ್ಯ, ವಿಜ್ಞಾನ, ತಂತ್ರಜ್ಞಾನ, ನೀರಾವರಿ, ಕೈಗಾರಿಕೆ, ವಾಣಿಜ್ಯ, ಸಾರಿಗೆ, ರಸ್ತೆ ಸಂಪರ್ಕ, ಕ್ರೀಡೆಗಳು ಹೀಗೆ ಹಲವಾರು ಆಯಾಮಗಳ ಕುರಿತು ಆಯಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿದ್ವತ್ಪೂರ್ಣ ಸಂಶೋಧನಾ ಪುಸ್ತಕಗಳನ್ನು ಹೊರತರುವ ಯೋಜನೆ ಇದಾಗಿದೆ.

ಈ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರ-ಅಂತಾರಾಷ್ಟ್ರ ಮಟ್ಟದಲ್ಲಿ ಸಂಶೋಧನೆ ಮಾಡಿರುವ ವಿದ್ವಾಂಸರಿಂದ ಒಂದು ನೂರು ಪುಸ್ತಕಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಸಿ ಪ್ರಕಟಿಸಲಾಗುವುದು.

ಈ ಯೋಜನೆಯಲ್ಲಿ ಸಂಶೋಧನಾತ್ಮಕ ಪುಸ್ತಕ ಬರೆಯುವ ಆಸಕ್ತಿ ಇರುವವರು ತಾವು ಪುಸ್ತಕ ಬರೆಯಬಹುದಾದ ಕ್ಷೇತ್ರ, ವಿಷಯ, ಶೀರ್ಷಿಕೆಗಳನ್ನು ಸ್ಪಷ್ಟವಾಗಿ ಬರೆದು ಐದು ಪುಟಗಳಿಗೆ ಮೀರದಂತೆ ಸಾರಲೇಖಗಳನ್ನು ಕಳಿಸಿಕೊಡಬಹುದು. ಸಾರಲೇಖವು ತಮ್ಮ ಆಯ್ದ ಕ್ಷೇತ್ರಗಳಲ್ಲಿ, ಆಯ್ದ ವಿಷಯಕ್ಕೆ ಸಂಬಂಧಿಸಿದ ಇದುವರೆಗಿನ ಅಧ್ಯಯನಗಳು, ಸಿದ್ದಾಂತಗಳ ಅನ್ವಯ, ಅಧ್ಯಯನ ಕ್ಷೇತ್ರದ ಸದ್ಯದ ಪರಿಸ್ಥಿತಿ, ಪ್ರಸ್ತುತ ಅಧ್ಯಯನಕ್ಕೆ ಬಳಸಿಕೊಳ್ಳುವ ಸಿದ್ದಾಂತ ಮತ್ತು ವಿಧಾನಗಳು, ಅವುಗಳ ಸಮರ್ಪಕತೆ, ಆಯ್ದುಕೊಂಡ ವಿಷಯದ ಅಧ್ಯಯನದ ಫಲಿತಗಳು, ಸಾಮಾಜಿಕ ಉಪಯೋಗಗಳು ಇವುಗಳನ್ನು ಒಳಗೊಂಡಿರಬೇಕು. ಸೂಚಕ ಪದಗಳು ಮತ್ತು ಅವಶ್ಯ ಸಂದರ್ಭ ಗ್ರಂಥಗಳು ಕಡ್ಡಾಯ ಇರಬೇಕು. ಈ ಎಲ್ಲವುಗಳನ್ನೂ ಒಳಗೊಂಡ ಐದು ಪುಟಗಳಿಗೆ ಮೀರದಂತೆ ಸಾರಲೇಖವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ‘ಅಭಿವೃದ್ಧಿ ಭವನ' ಐವಾನ-ಏ-ಶಾಹಿ, ಕಲಬುರಗಿ-585102 ಈ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಅಥವಾ ಇಮೇಲ್ ಐಡಿ: kketihasa@gmail.com ಮೂಲಕವೂ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9844615020ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X