Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಜ್ಞಾನೇಶ್ ಕುಮಾರ್ ರಾಜೀನಾಮೆ,...

Raichur | ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಜೈಲ್ ಭರೋ ಚಳವಳಿ

ವಾರ್ತಾಭಾರತಿವಾರ್ತಾಭಾರತಿ12 Oct 2026 12:45 PM IST
share
Raichur | ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಜೈಲ್ ಭರೋ ಚಳವಳಿ

ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದ ಬಳಿ ಜೈಲ್ ಭರೋ ಚಳವಳಿ ನಡೆಸಲಾಯಿತು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ನಾಗರಿಕರ ಮತದಾನದ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟಗಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅಝೀಝ್‌ ಜಾಗೀರದಾರ್, ಮತದಾರರ ಪಟ್ಟಿಗಳ ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಆತಂಕ, ಹೆಸರುಗಳನ್ನು ಮರುಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿನ ತೊಂದರೆಗಳು ಹಾಗೂ ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.

ಮತದಾನವು ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದ್ದು, ಯಾವುದೇ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ವಿಶೇಷವಾಗಿ ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ವಲಸೆ ಕಾರ್ಮಿಕರು, ಮಹಿಳೆಯರು ಹಾಗೂ ಇತರ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಜನವರಿ 2025ರಲ್ಲಿ ಇದ್ದ ಮತದಾರರ ಪಟ್ಟಿಗಳನ್ನು ಮರುಸ್ಥಾಪಿಸಬೇಕು. ಮತದಾರರ ಪಟ್ಟಿಯಿಂದ ಅಳಿಸಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವ ಮೂಲಕ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ಖಚಿತಪಡಿಸಬೇಕು. ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಪಾರದರ್ಶಕತೆ, ಕಾನೂನುಬದ್ಧತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು. ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರನ್ನು ಹೊರಗಿಡುವ ಯಾವುದೇ ಕ್ರಮವನ್ನು ಸಹಿಸಲಾಗದು. ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕಿನ ರಕ್ಷಣೆಗಾಗಿ ಜನರು ಕೂಡ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಮುಖಂಡರಾದ ಜಿಲಾನಿ ಯರಗೇರಾ, ಆರ್.ಎಚ್. ಕಲ್ಮಗಿ, ಬಸವರಾಜ್ ಬೆಳಮುಗಿ, ಭೀಮಯ್ಯ, ಜಗದೀಶ್, ಹನೀಫ್ ಅಬಕಾರಿ, ಖಾದರ್, ವೀರೇಶ್, ಜೋಳಯ್ಯ, ನರಸಪ್ಪ, ಈರಣ್ಣ, ಯಲ್ಲಪ್ಪ, ಮಹೇಂದ್ರ, ಹನುಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

SIRGyanesh KumarJail BharoRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X