ರಾಯಚೂರು | ಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಜೆಡಿಎಸ್‌ನಿಂದ ಪ್ರತಿಭಟನೆ

ರಾಯಚೂರು : ಹಿಂಗಾರು ಮತ್ತು ಮುಂಗಾರು ಜೋಳ ಖರೀದಿಗೆ ರೈತರು ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಜೋಳ ಖರೀದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಾನ್ವಿ ನಗರದ ಬಸವ ವೃತ್ತದಲ್ಲಿ ಜೆಡಿಎಸ್ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಕೆಲಹೊತ್ತು ರಸ್ತೆ ಮೇಲೆ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಬಸ್ ನಿಲ್ದಾಣ ದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಕಾರ್ಯಕರ್ತರು, ರೈತರು ,ಇನ್ನಿತರರು ಉಪಸ್ಥಿತರಿದ್ದರು.
Next Story





