ರಾಯಚೂರು | ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿಯ ಬಂಧನ

ರಾಯಚೂರು: ಲಿಂಗಸುಗೂರು ತಾಲೂಕಿನಲ್ಲಿ ನಡೆದ ಆಭರಣ ಕಳ್ಳತನ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಪೋತರಾಜ್ (35 ) ಬಂಧಿತ ಆರೋಪಿ. ಆರೋಪಿಯಿಂದ 36 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಜುಲೈ 09ರಂದು ವೆಂಕಟೇಶ ಎಂಬವರು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆಗೆ ಲಿಂಗಸುಗೂರು ಪಿಎಸ್ ಐ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
Next Story





