Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲಾಡಳಿತದಿಂದ ಕನಕದಾಸ...

ರಾಯಚೂರು | ಜಿಲ್ಲಾಡಳಿತದಿಂದ ಕನಕದಾಸ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ8 Nov 2025 9:03 PM IST
share
ರಾಯಚೂರು | ಜಿಲ್ಲಾಡಳಿತದಿಂದ ಕನಕದಾಸ ಜಯಂತಿ ಆಚರಣೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 8ರಂದು ನಗರದಲ್ಲಿ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ, ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು.

ನಗರದ ಗಂಜ್ ಸರ್ಕಲ್ ಹತ್ತಿರದ ಕನಕದಾಸರ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಗರದ ರಂಗಮಂದಿರದವರೆಗೆ ಸಾಗಿತು.

ಜಿಲ್ಲಾ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಬಸನಗೌಡ ದದ್ದಲ್, ಕನಕದಾಸರು ಓರ್ವ ಮಹಾನ್‌ ಹರಿದಾಸ, ಸಂತ ಹಾಗೂ ತತ್ವಜ್ಞಾನಿಯಾಗಿದ್ದಾರೆ. ಕರ್ನಾಟಕದ ಭಕ್ತಿ ಚಳುವಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಕನಕದಾಸರ ಕೀರ್ತನೆಗಳು ಸಮಸಮಾಜದ ಕನಸನ್ನು ಬಿತ್ತುತ್ತವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ ಎಂದರು. ಹಾಲುಮತ ಸಮಾಜದ ಕೊಡುಗೆಯು ನಾಡಿನ ಅಭಿವೃದ್ಧಿಯಲ್ಲಿ ಪ್ರಮುಖವಾಗಿದೆ ಎಂದರು.

ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಮಾತನಾಡಿ, ಹಾಲುಮತ ಸಮಾಜವು ದೊಡ್ಡ ಸಮಾಜವಾಗಿದೆ. ಈ ಸಮಾಜಕ್ಕೆ ದೊಡ್ಡ ಶಕ್ತಿಯಿದೆ ಎಂದರು. ನಗರದಲ್ಲಿ ಕನಕ ಭವನ ನಿರ್ಮಾಣಕ್ಕೆ ಒತ್ತು ಕೊಡಲಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ಸಹ ನೀಡಲಾಗುತ್ತದೆ ಎಂದರು.

ಎಂಎಲ್‌ಸಿ ಎ.ವಸಂತ್‌ ಕುಮಾರ್ ಮಾತನಾಡಿ, ಹಾಲುಮತ‌ ಸಮಾಜದವರು ಜಾಗೃತರಾಗಬೇಕು. ಸಮಾಜವು ಒಗ್ಗಟ್ಟಾಗಿ ಮುಂದೆ ಬರಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಮಾತನಾಡಿ, ಕನಕದಾಸರ ಸಾಹಿತ್ಯ ಅಧ್ಯಯನ ಮಾಡಬೇಕು. ನಾವೆಲ್ಲರು ಒಂದು ಎನ್ನುವ ಅವರ ಜೀವನ ಸಂದೇಶ ಅರಿಯಬೇಕು ಎಂದರು.

ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಾಣೇಶ್ ಕುಲಕರ್ಣಿ ಮಾತನಾಡಿ, ಭಕ್ತ ಕನಕದಾಸರು ಕರ್ನಾಟಕದಲ್ಲಿ 15-16ನೇ ಶತಮಾನಗಳಲ್ಲಿ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಪ್ರಮುಖರಾಗಿದ್ದರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರಾಗಿದ್ದರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಆಗಿದ್ದರು. ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವರೆಂದು ಬಣ್ಣಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಲುಮತ ಸಮುದಾಯದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮಠಮಾರಿ ಶಿವಾನಂದ ಮಠದ ಪರಮಪೂಜ್ಯ ಶ್ರೀಜ್ಞಾನನಂದ ಮಹಾರಾಜ, ತುರ್ವಿಹಾಳ ಗುರು ಅಮೋಘಸಿದ್ದೇಶ್ವರ ಮಠದ ಪೂಜ್ಯ ಮಾದಯ್ಯಸ್ವಾಮಿ, ಲಕ್ಷ್ಮಣ ತಾತಾ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ್‌ ರಾಣಿ, ಸಮಾಜದ ಮುಖಂಡರಾದ ಕೆ.ಬಸವಂತಪ್ಪ, ಬಿ.ಬಸವರಾಜ, ಮಹಾದೇವಪ್ಪ ಮಿರ್ಜಾಪುರ, ನೀಲಕಂಠ, ಕಸ್ತೂರಮ್ಮ ಬೀರಪ್ಪ, ನಾಗರಾಜ ಮಡ್ಡಿಪೇಟ್, ಡಾ.ನಾಗವೇಣಿ , ನಾಗರತ್ನ, ನಾಗೇಂದ್ರ ಮಾಟಮಾರಿ, ಹನುಮಂತಪ್ಪ ಜಾಲಿಬೆಂಚಿ, ಶೇಖರ ವಾರದ ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X