Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನ.27ರಂದು ಜಿಲ್ಲಾದ್ಯಂತ...

Raichur | ನ.27ರಂದು ಜಿಲ್ಲಾದ್ಯಂತ ಕನಕದಾಸರ ಜಯಂತಿ ಆಚರಣೆ: ಎಡಿಸಿ ಸೋಮಲಿಂಗ ಗೆಣ್ಣೂರ

ಕನಕ ಜಯಂತಿಯ ಪೂರ್ವಭಾವಿ ಸಭೆ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ19 Nov 2026 7:25 PM IST
share
Raichur | ನ.27ರಂದು ಜಿಲ್ಲಾದ್ಯಂತ ಕನಕದಾಸರ ಜಯಂತಿ ಆಚರಣೆ: ಎಡಿಸಿ ಸೋಮಲಿಂಗ ಗೆಣ್ಣೂರ

ರಾಯಚೂರು: ಭಕ್ತ ಕನಕದಾಸರ ಜಯಂತಿಯನ್ನು ಜಿಲ್ಲಾದ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರ ಸೂಚಿಸಿದರು.

ನವೆಂಬರ್ 19ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾರ್ಗಸೂಚಿಯಂತೆ ಜಯಂತಿ ಆಚರಣೆ ನಡೆಯಬೇಕು. ಶಿಷ್ಟಾಚಾರದ ಅನುಸಾರ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸಬೇಕು. ಜಯಂತಿಗೆ ಆಗಮಿಸುವ ಜನರಿಗೆ ಕುಡಿಯುವ ನೀರು, ಉಪಾಹಾರ ಹಾಗೂ ಆಸನದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಸೇರಿದಂತೆ ವಿವಿಧೆಡೆ ಕನಕದಾಸರ ಜಯಂತಿ ಆಚರಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಚಳಿಗಾಲ ಇರುವುದರಿಂದ ಮತ್ತು ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿರುವುದರಿಂದ ನವೆಂಬರ್ 27ರಂದು ಬೆಳಿಗ್ಗೆ 9 ಗಂಟೆಯ ಬದಲಿಗೆ 9.30ಕ್ಕೆ ನಗರದ ಎಪಿಎಂಸಿ ವೃತ್ತದ ಬಳಿಯಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನಕದಾಸರ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಮೆರವಣಿಗೆ ನಡೆಯುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಹಾಗೂ ಕಾಂಪೌಂಡ್ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಕನಕ ಜಯಂತಿಯಂದು ಸರ್ಕಾರಿ ರಜೆ ಇರುವುದರಿಂದ ಹಲವು ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಜಯಂತಿ ಆಚರಿಸದೆ ನಿರ್ಲಕ್ಷಿಸಲಾಗುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹಾಲಿಂಗರಾಯ್ಯ ಬಿ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸರಸ್ವತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಸುರೇಶ್, ರಾಯಚೂರು ಸಿಪಿಐ ಉಮೇಶ ಕಾಂಬಳೆ, ಕಾರ್ಮಿಕ ಅಧಿಕಾರಿ ಆರತಿ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಗುಂಡಪ್ಪ ಸಾಹುಕಾರ್, ಸಮಾಜದ ಮುಖಂಡರಾದ ಹನುಮಂತಪ್ಪ ಜಾಲಿಬೆಂಚಿ, ಶೇಖರ, ರಾಮನಗೌಡ, ಮಹಾದೇವಪ್ಪ ಮಿರ್ಜಾಪುರ, ನಾಗೇಂದ್ರಪ್ಪ ಮಟಮಾರಿ ಸೇರಿದಂತೆ ಸಮಾಜದ ಇತರ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

RaichurKanakadasa Jayanti
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X