ರಾಯಚೂರು | ಕೆಎಸ್ಸಾರ್ಟಿಸಿ ಬಸ್ ಪಲ್ಟಿ: 15 ಪ್ರಯಾಣಿಕರಿಗೆ ಗಾಯ

ರಾಯಚೂರು: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 15 ಪ್ರಯಾಣಿಕರು ಗಾಯಗೊಂಡ ಘಟನೆ ರಾಯಚೂರು ನಗರ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.
ಗಾಯಾಳುಗಳ ಪೈಕಿ ಓರ್ವನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ಚಾಲಕನ ನಿದ್ದೆ ಮಂಪರು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story







