Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನಕಲಿ ಎಸ್‌ಟಿ ಪ್ರಮಾಣ ಪತ್ರ...

ರಾಯಚೂರು | ನಕಲಿ ಎಸ್‌ಟಿ ಪ್ರಮಾಣ ಪತ್ರ ತಡೆಯಲು ಸರಕಾರಕ್ಕೆ ನಾಯಕ ಸಮಾಜ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Sept 2025 3:37 PM IST
share
ರಾಯಚೂರು | ನಕಲಿ ಎಸ್‌ಟಿ ಪ್ರಮಾಣ ಪತ್ರ ತಡೆಯಲು ಸರಕಾರಕ್ಕೆ ನಾಯಕ ಸಮಾಜ ಆಗ್ರಹ

ರಾಯಚೂರು : ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿರುವುದಾಗಿ ತಿಳಿಯದ ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದಿಂದ ಬುಧವಾರ ಪ್ರತಿಭಟನೆ ನಡೆಯಿತು.

ರಾಯಚೂರು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ, ಆದಿಕವಿ ಮಹರ್ಷಿ ವಾಲ್ಮೀಕಿ ವೃತ್ತದಿಂದ ಬೈಕ್ ರ‍್ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮಾಜದ ಮುಖಂಡರು ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ನಿಲ್ಲಿಸಬೇಕು ಮತ್ತು ಪರಿಶಿಷ್ಟ ಪಂಗಡದ ನಿಜವಾದ ನಾಯಕ ತಳವಾರರಿಗೆ ಅನ್ಯಾಯವಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಅಕ್ರಮವಾಗಿ ಬೇರೆ ಸಮುದಾಯದವರು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯಗಳನ್ನು ವಂಚಿಸುತ್ತಿದ್ದಾರೆ. ಇದರಿಂದ ನೈಜ ತಳವಾರ ಜಾತಿಯವರಿಗೆ ಶಿಕ್ಷಣ, ನೇಮಕಾತಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಘೋರ ಅನ್ಯಾಯ ಸಂಭವಿಸಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹೆಚ್ಚುವರಿ 10,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ, ಪರಿಶಿಷ್ಟ ಪಂಗಡದ ಜನಾಂಗದ ಆರ್ಥಿಕ, ಶೈಕ್ಷಣಿಕ, ರಾಜಕೀಯ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು.

ವಾಲ್ಮೀಕಿ ಭವನಗಳನ್ನು ಪೂರ್ಣಗೊಳಿಸಿ, ವಿದ್ಯಾರ್ಥಿ ವೇತನ ಮತ್ತು ಸಹಾಯಧನಗಳನ್ನು ನಿರಂತರವಾಗಿ ನೀಡಬೇಕು. ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆದು ಭದ್ರತೆ ಒದಗಿಸಬೇಕು. ಬೇರೆ ಪ್ರಬಲ ಸಮುದಾಯಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಘುವೀರ್ ನಾಯಕ್ ಮಲ್ಲಿಕಾರ್ಜುನಾಯಕ, ಭೀಮರಾಯ ಹದ್ದಿನಾಳ, ಕೊಟ್ರೇಶಪ್ಪ ಕೋರಿ, ರಾಮ ನಾಯಕ್, ನರೇಂದ್ರ ನಾಯಕ್, ರಮೇಶ್ ನಾಯಕ, ರಾಮಕೃಷ್ಣ ನಾಯಕ, ರೂಪಾ ಶ್ರೀನಿವಾಸ್ ನಾಯಕ್, ಕರಿಯಪ್ಪ ನಾಯಕ ಮಡ್ದಿಪೇಟ, ವಿರುಪಾಕ್ಷಿ ನಾಯಕ ಮಂಗಳಾರಪೇಟೆ, ನಾಗರಾಜ್ ನಾಯಕ್ ಗಂಗಾ ನಿವಾಸ್, ಅರುಣ್ ಕುಮಾರ್ ದೊರೆ, ಸಂಗಮೇಶ್ ನಾಯಕ್, ತಿಮ್ಮಪ್ಪ ಮಟಮಾರಿ, ರವಿ ನಾಯಕ ತಿಮ್ಮಪ್ಪರಪೇಟೆ ಸೇರಿದಂತೆ ಅನೇಕ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X