Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಮುಖ್ಯ ಚುನಾವಣಾ ಆಯುಕ್ತರನ್ನು...

Raichur | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2026 11:45 PM IST
share
Raichur | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂ-ಎಲ್) ಲಿಬರೇಷನ್ ಹಾಗೂ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷಗಳ ನೇತೃತ್ವದಲ್ಲಿ ಸೋಮವಾರ ನಗರದ ಟಿಪ್ಪು ಸುಲ್ತಾನ್ ಗಾರ್ಡನ್ ಸಮೀಪ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಮುಖಂಡರು ಮುಖ್ಯ ಚುನಾವಣಾ ಆಯುಕ್ತರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಡಪಕ್ಷಗಳ ಮುಖಂಡರು, ಸೆಪ್ಟೆಂಬರ್ 23ರಂದು ಪ್ರಕಟವಾದ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಳನ್ನು ಉಲ್ಲೇಖಿಸಿ, ಚುನಾವಣಾ ಆಯೋಗದೊಳಗಿನ ನಿರ್ಧಾರ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದರು.

ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ನೋಂದಣಿ, ಹೆಸರುಗಳನ್ನು ತೆಗೆದುಹಾಕುವುದು, ಮರು ಸೇರ್ಪಡೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಹಲವು ನಿರ್ಧಾರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. ಈ ಬೆಳವಣಿಗೆಗಳು ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಪಾರದರ್ಶಕತೆ ಮತ್ತು ಸ್ವಾಯತ್ತತೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಿವೆ ಎಂದು ಹೇಳಿದರು.

ಮತದಾರರ ದತ್ತಾಂಶ ನಿರ್ವಹಣೆಯಲ್ಲಿ ಕೇಂದ್ರೀಕರಣ ಹೆಚ್ಚಾಗಿದೆ ಹಾಗೂ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಧಿಕಾರಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂಬ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮಾತ್ರ ಸೀಮಿತವಾದ ವಿಷಯವಲ್ಲ. ಇದು ಚುನಾವಣಾ ಆಯೋಗದ ಪಾರದರ್ಶಕತೆ, ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆ ಹಾಗೂ ಸಾರ್ವತ್ರಿಕ ಮತದಾನದ ಹಕ್ಕಿನ ರಕ್ಷಣೆಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಪ್ರತಿಭಟನಾಕಾರರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು, ಎಸ್‌ಐಆರ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು, ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾಗಿದೆ ಎನ್ನಲಾದವರ ಹೆಸರುಗಳನ್ನು ಮರುಸ್ಥಾಪಿಸಬೇಕು ಹಾಗೂ ಚುನಾವಣಾ ಆಯೋಗದ ಸ್ವತಂತ್ರ ಮತ್ತು ಪಾರದರ್ಶಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿ ಸುಧಾರಣೆ ತಂದು, ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಆಯ್ಕೆ ಸಮಿತಿಯ ಮೂಲಕ ನೇಮಕಾತಿ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಕ್ಯಾತ್ನಟಿ, ಸಿಪಿಐ(ಎಂ-ಎಲ್) ಲಿಬರೇಷನ್ ಮುಖಂಡ ಅಜೀಜ್ ಜಗೀರ್‌ದಾರ್, ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಚಂದ್ರಗಿರೀಶ ಸೇರಿದಂತೆ ವಿವಿಧ ಎಡಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

Chief Election CommissionerRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X