Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕುಷ್ಠರೋಗ ಪತ್ತೆ ಹಚ್ಚುವ...

ರಾಯಚೂರು | ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಅಚ್ಚುಕಟ್ಟಾಗಿ ನಡೆಯಲಿ : ಈಶ್ವರ ಕಾಂದೂ

ವಾರ್ತಾಭಾರತಿವಾರ್ತಾಭಾರತಿ29 Oct 2025 7:20 PM IST
share
ರಾಯಚೂರು | ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಅಚ್ಚುಕಟ್ಟಾಗಿ ನಡೆಯಲಿ : ಈಶ್ವರ ಕಾಂದೂ

ರಾಯಚೂರು : ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ದೇಹದ ಮೇಲೆ ಕಂಡುಬಂದಲ್ಲಿ ನಿರ್ಲಕ್ಷಿಸದೆ ಕೂಡಲೇ ವೈದ್ಯರ ಬಳಿ ಖಚಿತ ಪಡಿಸಿಕೊಳ್ಳಬೇಕು. ಈ ಬಗ್ಗೆ ಸಾರ್ವಜನಿಕರು ಹೆದರಬಾರದು. ಇದು ಸಂಪೂರ್ಣ ಗುಣಪಡಿಸಬಹುದಾಗಿದ್ದು, ಇದಕ್ಕಾಗಿ ಸರಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ಜನತೆಗೆ ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನ.3 ರಿಂದ 19ರವರೆಗೆ ಜಿಲ್ಲೆಯಾದ್ಯಂತ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಕುರಿತು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಕ್ರೋ ಬ್ಯಾಕ್ಟೀರಿಯಂ ಲೇಪ್ರೆ ಎಂಬ ಸೂಕ್ಮಾಣುವಿನಿಂದ ಬರುವ ಚರ್ಮ ಮತ್ತು ನರದ ಖಾಯಿಲೆಯಾಗಿದೆ. ವ್ಯಕ್ತಿಯ ದೇಹದ ಮೇಲೆ ದಪ್ಪನಾದ ಅಥವಾ ಹೊಳೆಯುವ ಎಣ್ಣೆಯುಕ್ತ ಚರ್ಮ, ಗಂಟುಗಳು, ಕಣ್ಣಿನ ರೆಪ್ಪೆ ಮುಚ್ಚಲು ಸಾಧ್ಯವಾಗದಿರುವುದು, ಕೈ ಅಥವಾ ಕಾಲುಗಳಲ್ಲಿ ವಾಸಿಯಾಗದ ಹುಣ್ಣು, ಬೆರಳುಗಳು ಮಡಿಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕೈ ಅಥವಾ ಕಾಲುಗಳಲ್ಲಿ ಜುಮ್ಮೆನಿಸುವುದು ಅಥವಾ ಮರಗಟ್ಟುವಿಕೆ ಮುಂತಾದವುಗಳು ಕುಷ್ಠರೋಗದ ಲಕ್ಷಣಗಳಾಗಿದ್ದು, ರೋಗದ ತೀವ್ರತೆಯಾಧರಿಸಿ 6 ತಿಂಗಳು ಅಥವಾ 1 ವರ್ಷ ಅವಧಿಯ ಚಿಕಿತ್ಸೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಬೇಕೆಂದು ಸಿಇಓ ಅವರು ಸೂಚನೆ ನೀಡಿದರು.

ವ್ಯಾಪಕ ಪ್ರಚಾರ :

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಾಲೂಕಾಡಳಿತ, ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು. ಶಾಲಾ ತರಗತಿಗೆ ತೊಂದರೆಯಾಗದಂತೆ ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಅಂಗನವಾಡಿ ಶಿಕ್ಷಕಿಯರಿಂದಲು ಸಹ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಕುಷ್ಠರೋಗದ ಬಗ್ಗೆ ಪ್ರಚಾರ ನಡೆಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ, ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದ ಅಂಗವಾಗಿ ಜನಜಾಗೃತಿಯ ಭಿತ್ತಿಪತ್ರ ಬಿಡುಗಡೆ ನಡೆಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವಿಜಯಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ್ ಕೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ್, ತಾಲೂಕ ಆರೋಗ್ಯ ಅಧಿಕಾರಿ ಡಾ.ಬನದೇಶ್ ಗಬ್ಬೂರು, ಡಾ.ಫರಹಾ ನಸ್ರಿನ್ ಖಾಜಿ, ಡಾ.ಮಲ್ಲಿಕಾರ್ಜುನ ರೆಡ್ಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಂಗಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ದೊಡ್ಡಮನಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುಪ್ರಸಾದ್ ಸೇರಿದಂತೆ ನವೋದಯ ವೈದ್ಯಕೀಯ ಕಾಲೇಜ್‌ನ ಚರ್ಮರೋಗ ತಜ್ಞ ವೈದ್ಯರು ಹಾಗೂ ಇನ್ನೀತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X