ರಾಯಚೂರು | ಬೈಕ್‌ಗೆ ಲಾರಿ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಹಳ್ಳದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೋಮ್ಮನಾಳ ಗ್ರಾಮದ ನಾಗಪ್ಪ (48) ಮೃತ ದುರ್ದೈವಿ. ನಾಗಪ್ಪ ತನ್ನ ಪತ್ನಿಯೊಂದಿಗೆ ಮಾನ್ವಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿ ಬರುತ್ತಿದ್ದ ಲಾರಿಯು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿ ದೇವಮ್ಮಗೆ ಗಂಭೀರವಾದ ಗಾಯಗಳಾಗಿದೆ. ಅವರನ್ನು ಚಿಕಿತ್ಸೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





