Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ತುಂಗಭದ್ರಾ ನೀರಾವರಿ...

Raichur | ತುಂಗಭದ್ರಾ ನೀರಾವರಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

ವಾರ್ತಾಭಾರತಿವಾರ್ತಾಭಾರತಿ1 Oct 2026 5:58 PM IST
share
Raichur | ತುಂಗಭದ್ರಾ ನೀರಾವರಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

ರಾಯಚೂರು : ರಾಯಚೂರು ಜಿಲ್ಲೆ ಸೇರಿದಂತೆ ತುಂಗಭದ್ರಾ ನೀರಾವರಿ ಯೋಜನೆಯ ವಿವಿಧ ವಿಭಾಗಗಳಲ್ಲಿ 25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸಮಸ್ಯೆಗಳ ಕುರಿತು ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಗುರುವಾರ ವಿಕಾಸಸೌಧದಲ್ಲಿ ಸಭೆ ನಡೆಯಿತು.

ವರ್ಷಪೂರ್ತಿ ನಿರಂತರ ಕೆಲಸ, ಉದ್ಯೋಗ ಭದ್ರತೆ, 2026ರ ಜನವರಿಯಿಂದ ಬಾಕಿ ಇರುವ ವೇತನ ಪಾವತಿ, ಪಿಎಫ್–ಇಎಸ್‌ಐ ಸಮಸ್ಯೆಗಳ ಪರಿಹಾರ, ಕಾರ್ಮಿಕ ಇಲಾಖೆ ಹಾಗೂ ನ್ಯಾಯಾಲಯದ ಆದೇಶಗಳ ಜಾರಿ, ಟೆಂಡರ್ ಪ್ರಕ್ರಿಯೆಯ ವಿಳಂಬದಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಹಾಗೂ ಗುತ್ತಿಗೆ ವ್ಯವಸ್ಥೆಯ ಬದಲಿಗೆ ಕಾನೂನುಬದ್ಧ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಆಗಸ್ಟ್ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು ನೀಡಿದ್ದ ಭರವಸೆಗಳನ್ನೂ ಕಾರ್ಮಿಕರ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಹಲವು ವರ್ಷಗಳಿಂದ ಒಂದೇ ಸ್ವರೂಪದ ನೀರಾವರಿ ನಿರ್ವಹಣಾ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಶಾಶ್ವತ ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಸಚಿವ ಚೆಲುವರಾಯಸ್ವಾಮಿ ಅವರು ಬೇಡಿಕೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಮತ್ತು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ಕೂಡ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಗುತ್ತಿಗೆ ಹಾಗೂ ಟೆಂಡರ್ ವ್ಯವಸ್ಥೆಯಿಂದ ಉಂಟಾಗುತ್ತಿರುವ ವೇತನ ವಿಳಂಬ, ಪಿಎಫ್–ಇಎಸ್‌ಐ ಸಮಸ್ಯೆ ಮತ್ತು ಆಡಳಿತಾತ್ಮಕ ಹೊರೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕಾನೂನು ಹಾಗೂ ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಕಾರ್ಮಿಕರ ಪ್ರತಿನಿಧಿಗಳು ಮನವಿ ಮಾಡಿದರು.

ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ರಾಥೋಡ್, ಅಧೀಕ್ಷಕ ಅಭಿಯಂತರರಾದ ಶ್ರೀನಿವಾಸ ಮಲ್ಲಿಗೆವಾಡ, ಸತ್ಯನಾರಾಯಣ ಶೆಟ್ಟಿ, ಕಾರ್ಯಪಾಲಕ ಅಭಿಯಂತರರಾದ ನಾಗನಾಥ, ಬಸಪ್ಪ ಜನಕರ್ ಸೇರಿದಂತೆ ಅಧಿಕಾರಿಗಳು ಹಾಗೂ ಕಾರ್ಮಿಕರ ಪ್ರತಿನಿಧಿಗಳು ಭಾಗವಹಿಸಿದ್ದರು.

ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ನಾಗಲಿಂಗಸ್ವಾಮಿ, ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್, ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ, ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಬಸವರಾಜ ಸೇರಿದಂತೆ ಅಜಿಜ್ ಜಾಗೀರದಾರ್, ಶರಣಬಸವ, ಜಡೆ ವೆಂಕಟೇಶ್, ಹುಚ್ಚಯ್ಯಸ್ವಾಮಿ, ಜಲೀಲ್ ಪಾಷಾ, ಶೇಖಪ್ಪ, ಚಂದು ಸಾಬ್, ಗಾದಿಲಿಂಗಪ್ಪ, ಜಡೆಪ್ಪ, ಆನಂದ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಸರ್ಕಾರದ ಭರವಸೆಗಳು ಶೀಘ್ರ ಆಡಳಿತಾತ್ಮಕ ಕ್ರಮಗಳು ಹಾಗೂ ಆದೇಶಗಳ ರೂಪದಲ್ಲಿ ಜಾರಿಯಾಗಬೇಕು. ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು) ಒತ್ತಾಯಿಸಿದೆ.

Tags

TungabhadraRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X