ರಾಯಚೂರು | ಶಾಸಕ ಬಸನಗೌಡ ದದ್ದಲ್‌ರಿಂದ ಲಿಂಗನಖಾನದೊಡ್ಡಿ ಶಾಲಾ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ರಾಯಚೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಲಿಂಗನಖಾನದೊಡ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ 5 ಕೊಠಡಿಗಳ ಕಾಮಗಾರಿಗೆ ಅ. 4ರಂದು ಭೂಮಿ ಪೂಜೆ ನೆರವೇರಿಸಿದರು.
ಅದೇ ಸಂದರ್ಭದಲ್ಲಿ ವಿಶೇಷ ಅನುದಾನದಡಿಯಲ್ಲಿ ನಡೆಯುತ್ತಿರುವ ಆಂಜನೇಯ್ಯ ದೇವಸ್ಥಾನದ ಕಾಮಗಾರಿಯ ವೀಕ್ಷಣೆಯನ್ನು ಅವರು ನಡೆಸಿದರು.
ಈ ಸಂದರ್ಭದಲ್ಲಿ ಗಿಲ್ಲೇಸೂಗುರ ಬ್ಲಾಕ್ ಅಧ್ಯಕ್ಷರು, ಊರಿನ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Next Story





