ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯ ಆರೋಪ

ರಾಯಚೂರು : ತೀವ್ರ ರಕ್ತಸ್ರಾವದಿಂದ ಬಾಣಂತಿಯೊರ್ವರು ಮೃತಪಟ್ಟಿರುವ ಘಟನೆ ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿದೆ.
ಮೃತ ಬಾಣಂತಿಯನ್ನು ಸಿರವಾರ ತಾಲೂಕು ಬಲ್ಲಟಗಿ ಗ್ರಾಮದ ನಿವಾಸಿ ಶಿವಗಂಗಮ್ಮ ಗಂಗಾಧರ (25) ಎಂದು ಗುರುತಿಸಲಾಗಿದೆ.
ಬುಧವಾರ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿದ್ದರು. ಶಿಶುವಿಗೆ ಜನ್ಮ ನೀಡಿದ ಬಳಿಕೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಆಕೆಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಾನ್ವಿ ತಾಲೂಕು ಆಸ್ಪತ್ರೆ ದಾಖಲಿಸಿದಾಗ ರಕ್ತಸ್ರಾವ ಹೆಚ್ಚಾಗಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಎಂದು ಮೃತಳ ಸಂಬಂಧಿಗಳು ಆರೋಪಿಸಿದರು.
Next Story





