Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಧಾರ್ಮಿಕ ವಿಧಿಗಳ ಜತೆಗೆ...

Raichur | ಧಾರ್ಮಿಕ ವಿಧಿಗಳ ಜತೆಗೆ ಜನಹಿತ ಕಾರ್ಯಕ್ಕೂ ಮಠಗಳು ಆದ್ಯತೆ ನೀಡಬೇಕು: ಜಯಣ್ಣ

ವಾರ್ತಾಭಾರತಿವಾರ್ತಾಭಾರತಿ14 Aug 2026 12:03 PM IST
share
Raichur | ಧಾರ್ಮಿಕ ವಿಧಿಗಳ ಜತೆಗೆ ಜನಹಿತ ಕಾರ್ಯಕ್ಕೂ ಮಠಗಳು ಆದ್ಯತೆ ನೀಡಬೇಕು: ಜಯಣ್ಣ

ರಾಯಚೂರು: ಧಾರ್ಮಿಕ ವಿಧಿ-ವಿಧಾನಗಳ ಜತೆಗೆ ಭಾವೈಕ್ಯತೆಯ ಸಂದೇಶ ಸಾರುವುದರೊಂದಿಗೆ ಜನಹಿತ ಕಾರ್ಯಗಳಿಗೆ ಆದ್ಯತೆ ನೀಡುವುದು ಶ್ರೀಮಠಗಳ ಕರ್ತವ್ಯ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಜಯಣ್ಣ ಹೇಳಿದರು.

ನಗರದ ಕಿಲ್ಲೆ ಬೃಹನ್ಮಠದಲ್ಲಿ ಗುರುವಾರ ಸಂಜೆ 102ನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಲಾಗಿರುವ ಒಂದು ತಿಂಗಳ ಸಂತ ಶಿಶುನಾಳ ಶರೀಫರ ಜೀವನದರ್ಶನ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂತ ಶಿಶುನಾಳ ಶರೀಫರ ಜೀವನ ಹಾಗೂ ಅವರ ಗುರು ಗೋವಿಂದರ ಶಿಷ್ಯತ್ವದ ಕುರಿತು ಮಾತನಾಡಿದ ಅವರು, ಸಮಾಜದಲ್ಲಿ ನೈತಿಕ ಮೌಲ್ಯಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಅವುಗಳನ್ನು ಎತ್ತಿಹಿಡಿಯುವುದು ಎಲ್ಲರ ಕರ್ತವ್ಯವಾಗಿದೆ. ನೈತಿಕತೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರೀಮಠ ಕೈಗೊಂಡಿರುವ ಕಾರ್ಯಗಳು ಶ್ಲಾಘನೀಯ ಎಂದರು.

ಕಿಲ್ಲೆ ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಿದ್ದರಾಮೇಶ್ವರ ಶರಣರು, ಡಾ. ಕ್ಷೀರಲಿಂಗೇಶ್ವರ ಶರಣರು, ಮರಡಿ ಸಂತ ಫಕೀರ್ ಸಾಹೇಬ್ ಶರಣರು, ಸುಲ್ತಾನಪುರದ ಏಕ್ ಮಿನಾರ್ ಮಸೀದಿ ಅಧ್ಯಕ್ಷ ಅಬ್ದುಲ್ ಲತೀಫ್, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ದರೂರ್ ಬಸನಗೌಡ ವಿನಯ್ ಕುಮಾರ್, ಜಿ.ಶಿವಮೂರ್ತಿ ಕಡಗೊಳ್ ಆಂಜನೇಯ, ಎಸ್ಎಲ್ ಕೇಶವ ರೆಡ್ಡಿ, ಡಾ.ನಿಜಗುಣ ಶಿವಯೋಗಪ್ಪ, ಜವಳಿ ಸಲೀಂ ರಾಹಿ, ಅಸ್ಕಿಹಾಳ ವಿರೂಪಾಕ್ಷಪ್ಪ, ಸಾಹುಕಾರ ಮಲ್ಲಿಕಾರ್ಜುನ್ ಪಾಟಿಲ್, ಮಹಾಂತೇಶ ಯಾದವ್, ಪೆನಗೊಂಡಲ ಗೋವಿಂದರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಂತ ಶಿಶುನಾಳ ಶರೀಫರ ಪುರಾಣ ಪ್ರವಚನಕಾರ ವೆ.ಮೂ. ಸಿದ್ದರಾಮಯ್ಯ ಶಾಸ್ತ್ರಿಗಳು ಪ್ರವಚನ ನೀಡಿದರು. ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೆ.ಮೂ. ಶರಣಯ್ಯ ಸ್ವಾಮಿ ಸಿದ್ದಲಿಂಗೇಶ್ವರ ಹಿರೇಮಠ ಸ್ವಾಗತಿಸಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X