ರಾಯಚೂರು | ರಾಷ್ಟ್ರೀಯ ಏಕತಾ ದಿವಸ : ಎಸ್.ಎಸ್.ಆರ್.ಜಿ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ

ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ. ಅವರ ನಿರ್ದೇಶನದ ಮೇರೆಗೆ ನಗರದ ವೆಸ್ಟ್ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ಮಂಗಳವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರದ ಎಸ್.ಎಸ್.ಆರ್.ಜಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ರಾಷ್ಟ್ರದ ಏಕತೆ, ಸಹೋದರತೆ ಮತ್ತು ಪಟೇಲ್ ಅವರ ರಾಷ್ಟ್ರೀಯ ಏಕತಾ ಚಿಂತನೆಗಳ ಕುರಿತು ಪ್ರಬಂಧ ಮಂಡಿಸಿದರು.
ಉತ್ತಮವಾಗಿ ಪ್ರಬಂಧ ಮಂಡಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ. ಅವರು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಎಂ. ಶಾಂತವೀರ, ನಾಗರಾಜ್ ಮೆಕಾ, ಸಿಪಿಐ ಹಾಗೂ ಕಾಲೇಜಿನ ಪ್ರಾಂಶುಪಾಲ ಶರಣಪ್ಪ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ರೀತಿಯಲ್ಲಿ ಮಾತುಕತೆ ನಡೆಸಿದರು.
Next Story





