Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ರಿಮ್ಸ್ ಆಸ್ಪತ್ರೆಯಲ್ಲಿ ಕೈದಿ...

Raichur | ರಿಮ್ಸ್ ಆಸ್ಪತ್ರೆಯಲ್ಲಿ ಕೈದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು : ಡೆತ್ ನೋಟ್ ಪತ್ತೆ

ವಾರ್ತಾಭಾರತಿವಾರ್ತಾಭಾರತಿ5 Aug 2026 7:31 PM IST
share
Raichur | ರಿಮ್ಸ್ ಆಸ್ಪತ್ರೆಯಲ್ಲಿ ಕೈದಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು : ಡೆತ್ ನೋಟ್ ಪತ್ತೆ
ನಾಲ್ವರು ಸಹ ಕೈದಿಗಳ ವಿರುದ್ಧ ಎಫ್‌ಐಆರ್

ರಾಯಚೂರು, ಆ.5: ರಿಮ್ಸ್ ಆಸ್ಪತ್ರೆಯ ಕೈದಿಗಳ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ ಪವನಕುಮಾರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಹ ಕೈದಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ನಾಲ್ವರು ಸಹ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲಬುರಗಿ ಮೂಲದ ಪವನಕುಮಾರ ಕೊಲೆ ಪ್ರಕರಣವೊಂದರಲ್ಲಿ ವಿಚಾರಣಾಧೀನ ಕೈದಿಯಾಗಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯ ಕೈದಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 28ರಂದು ಅವರು ಶೌಚಾಲಯದಲ್ಲಿ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಆದರೆ ಮರಣೋತ್ತರ ಪರೀಕ್ಷೆಯ ವೇಳೆ ಪತ್ತೆಯಾದ ಡೆತ್‌ನೋಟ್‌ನಲ್ಲಿ ಸಹ ಕೈದಿಗಳಾದ ಪ್ರಭಾಕರ ರೆಡ್ಡಿ, ವಿನಯ ರೆಡ್ಡಿ, ಮಹೇಶ್ ರಾಳದೊಡ್ಡಿ ಹಾಗೂ ಶಿವರಾಜ ಸಿರವಾರ ಅವರಿಂದ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ಅನುಭವಿಸಿದ್ದಾಗಿ ಉಲ್ಲೇಖಿಸಲಾಗಿದೆ.

ಡೆತ್‌ನೋಟ್ ಪ್ರಕಾರ, ಟಿಬಿ ಕಾಯಿಲೆ ಇದ್ದ ಕಾರಣ ಪವನಕುಮಾರನನ್ನು ಕೀಳಾಗಿ ಕಾಣುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಊಟದ ತಟ್ಟೆಗೆ ಉಗುಳುವುದು, ನೀರು ಸುರಿಯುವುದು, ಗಂಜಿ ಚೆಲ್ಲುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಜಿಲ್ಲಾ ಕಾರಾಗೃಹ ಅಧಿಕಾರಿ ಅನಿತಾ ಹೀರೆಮಠ ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 108, 54, 352 ಹಾಗೂ 3(5) ಅಡಿಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಪ್ರಕರಣದೊಂದಿಗೆ, ನಗರದ ಘರ್ಷಣೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಆರೋಪಿಗಳಿಗೆ ಇದೀಗ ಸಹ ಕೈದಿಗೆ ಕಿರುಕುಳ ನೀಡಿದ ಮತ್ತೊಂದು ಪ್ರಕರಣವೂ ಸೇರ್ಪಡೆಯಾಗಿದೆ.

Tags

Death NoteRaichurRIMS Hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X