Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ತಿಡಿಗೋಳ ಜಾತ್ರೆಯಲ್ಲಿ ಜಾತಿ...

Raichur | ತಿಡಿಗೋಳ ಜಾತ್ರೆಯಲ್ಲಿ ಜಾತಿ ನಿಂದನೆ, ಸಾಮಾಜಿಕ ಬಹಿಷ್ಕಾರ ನಡೆದಿಲ್ಲ: ಅಮರೇಶ ಗಚ್ಚಿನಮನಿ

ವಾರ್ತಾಭಾರತಿವಾರ್ತಾಭಾರತಿ6 Nov 2026 8:00 PM IST
share
Raichur | ತಿಡಿಗೋಳ ಜಾತ್ರೆಯಲ್ಲಿ ಜಾತಿ ನಿಂದನೆ, ಸಾಮಾಜಿಕ ಬಹಿಷ್ಕಾರ ನಡೆದಿಲ್ಲ: ಅಮರೇಶ ಗಚ್ಚಿನಮನಿ

ರಾಯಚೂರು: ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ದಲಿತ ಮತ್ತು ಲಿಂಗಾಯತ ಸಮುದಾಯದ ಯುವಕರ ನಡುವೆ ನೂಕಾಟ, ತಳ್ಳಾಟ ನಡೆದಿದೆಯೇ ಹೊರತು ಜಾತಿ ನಿಂದನೆ ಅಥವಾ ಸಾಮಾಜಿಕ ಬಹಿಷ್ಕಾರದ ಘಟನೆ ನಡೆದಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗ್ರಾಮದ ಮುಖಂಡ ಅಮರೇಶ ಗಚ್ಚಿನಮನಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಶ್ರೀ ಆಂಜನೇಯ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಎಲ್ಲ ಸಮುದಾಯಗಳ ಜನರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಅ. 16ರಂದು ತಿಡಿಗೋಳದಿಂದ ಕೆಂಗಲ್‌ಗೆ ಮೆರವಣಿಗೆಯಲ್ಲಿ ತೆರಳಿ, ನದಿ ಸ್ನಾನದ ಬಳಿಕ ಎಲ್ಲ ಸಮುದಾಯಗಳವರಿಂದ ಅಕ್ಕಿ, ಬೇಳೆ, ಬೆಲ್ಲ ಸಂಗ್ರಹಿಸಿ ಸಾಮೂಹಿಕ ಭೋಜನ ಏರ್ಪಡಿಸಲಾಗುತ್ತದೆ. ಬಳಿಕ ಪಾದಯಾತ್ರೆಯ ಮೂಲಕ ಗ್ರಾಮಕ್ಕೆ ಮರಳಿ ಉಚ್ಚಾಯ ನಡೆಸಲಾಗುತ್ತದೆ ಎಂದರು.

ಭಾನುವಾರ ರಥೋತ್ಸವದ ಮಾದರಿಯಲ್ಲಿ ಮಹಾಪ್ರಸಾದ ಕಾರ್ಯಕ್ರಮ ನಡೆದಿದ್ದು, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಎರಡು ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಜಾತಿಗೆ ಪ್ರತ್ಯೇಕ ವ್ಯವಸ್ಥೆ ಅಥವಾ ತಾರತಮ್ಯ ಮಾಡಿಲ್ಲ. ಮೆರವಣಿಗೆಯ ಸಂದರ್ಭದಲ್ಲಿ ಡ್ರಮ್ ಬಾರಿಸುವ ವಿಚಾರವಾಗಿ ಯುವಕರ ನಡುವೆ ವಾಗ್ವಾದ ನಡೆದಿದೆ. ಎರಡೂ ಸಮುದಾಯಗಳ ಹಿರಿಯರು ಯುವಕರಿಗೆ ಬುದ್ಧಿವಾದ ಹೇಳಿ ಪರಿಸ್ಥಿತಿಯನ್ನು ಸರಿಪಡಿಸಿದ್ದಾರೆ. ವಾದ-ವಿವಾದ ಉಂಟಾದ ಎರಡೂ ಸಂದರ್ಭಗಳಲ್ಲಿ ಗ್ರಾಮದ ಎರಡೂ ಸಮುದಾಯಗಳ ಹಿರಿಯರೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.

ಆದರೂ ಉದ್ದೇಶಪೂರ್ವಕವಾಗಿ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಬಹಿಷ್ಕಾರ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನ ಸಮಿತಿಯು ಎಲ್ಲ ಸಮುದಾಯಗಳ ಮುಖಂಡರನ್ನು ಸನ್ಮಾನಿಸಿ ಗೌರವಿಸಿದೆ. ಎಲ್ಲ ಸಮುದಾಯಗಳ ಜನರು ಒಟ್ಟಾಗಿ ಸೇರಿಯೇ ಜಾತ್ರೆಯನ್ನು ನಡೆಸಿದ್ದಾರೆ. ಗ್ರಾಮದಲ್ಲಿ ಯಾರೂ ಜಾತಿ ತಾರತಮ್ಯ ಅಥವಾ ಸಾಮಾಜಿಕ ಬಹಿಷ್ಕಾರ ವಿಧಿಸಿಲ್ಲ. ಸುಳ್ಳು ಆರೋಪಗಳನ್ನು ಸೃಷ್ಟಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

ಯಾರೇ ಆಗಲಿ ಗ್ರಾಮಕ್ಕೆ ಬಂದು ವಸ್ತುಸ್ಥಿತಿಯನ್ನು ಅರಿಯಬಹುದು. ಸುಳ್ಳು ಪ್ರಚಾರವನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಿವಪುತ್ರಯ್ಯಸ್ವಾಮಿ, ಕೆ. ಶರಣಪ್ಪ, ಅಮರೇಗೌಡ, ಶೇಖರಪ್ಪ, ಆದೆಪ್ಪ ಗುಡುದೂರು, ವೀರನಗೌಡ ಪೊಲೀಸ್ ಪಾಟೀಲ್, ಯಂಕಣ್ಣ ಜಿನಗದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X