Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ‘ಜಾತಿವಾದಿಗಳಿಗೆ ಇಲ್ಲಿ...

Raichur | ‘ಜಾತಿವಾದಿಗಳಿಗೆ ಇಲ್ಲಿ ಪ್ರವೇಶವಿಲ್ಲ’ ಮಸ್ಕಿಯ 3ನೇ ವಾರ್ಡ್‌ನಲ್ಲಿ ವಿವಿಧ ಧರ್ಮದ ಯುವಕರಿಂದ ಗಣೇಶ ಪ್ರತಿಷ್ಠಾಪನೆ

ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷತೆ ಕುರಿತು ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ16 Sept 2026 10:32 PM IST
share
Raichur | ‘ಜಾತಿವಾದಿಗಳಿಗೆ ಇಲ್ಲಿ ಪ್ರವೇಶವಿಲ್ಲ’ ಮಸ್ಕಿಯ 3ನೇ ವಾರ್ಡ್‌ನಲ್ಲಿ ವಿವಿಧ ಧರ್ಮದ ಯುವಕರಿಂದ ಗಣೇಶ ಪ್ರತಿಷ್ಠಾಪನೆ

ಮಸ್ಕಿ : ಜಾತಿ–ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿರುವ ಇಂದಿನ ಸಂದರ್ಭದಲ್ಲಿ ವಿವಿಧ ಧರ್ಮಗಳ ಯುವಕರು ಒಗ್ಗೂಡಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಭಾವೈಕ್ಯತೆ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರಿರುವುದು ಪಟ್ಟಣದ ಜನರ ಗಮನ ಸೆಳೆದಿದೆ.

ಪಟ್ಟಣದ 3ನೇ ವಾರ್ಡ್‌ನಲ್ಲಿ ಗಜಕೇಸರಿ ಮಿತ್ರ ಮಂಡಳಿಯ ವತಿಯಿಂದ ವಿವಿಧ ಧರ್ಮಗಳಿಗೆ ಸೇರಿದ ಯುವಕರು ಒಗ್ಗೂಡಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಗಣೇಶ ಮಂಟಪದ ಬಳಿ ಅಳವಡಿಸಿರುವ ‘ಜಾತಿವಾದಿಗಳಿಗೆ ಇಲ್ಲಿ ಪ್ರವೇಶವಿಲ್ಲ’ ಹಾಗೂ ‘ನಾವೆಲ್ಲ ಒಂದೇ’ ಎಂಬ ಸಂದೇಶ ಸಾರುವ ಬ್ಯಾನರ್ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಇದರ ಜೊತೆಗೆ ‘ಹೆಣ್ಣಿನ ಕಣ್ಣೀರಲ್ಲ, ಅವಳ ನಗು ಬೇಕು; ಅತ್ಯಾಚಾರಕ್ಕೆ ಅಂತ್ಯ ಹಾಡಿ, ಸುರಕ್ಷಿತ ಸಮಾಜ ಕಟ್ಟೋಣ’ ಎಂಬ ಮಹಿಳಾ ಸುರಕ್ಷತೆ ಮತ್ತು ಗೌರವ ಕುರಿತ ಜಾಗೃತಿ ಸಂದೇಶವನ್ನೂ ಅಳವಡಿಸಲಾಗಿದೆ. ಧಾರ್ಮಿಕ ಆಚರಣೆಯ ಜೊತೆಗೆ ಸಾಮಾಜಿಕ ಜಾಗೃತಿಗೂ ಆದ್ಯತೆ ನೀಡಲಾಗಿದೆ.

ಜಾತಿ–ಧರ್ಮದ ವಿಚಾರದಲ್ಲಿ ಸಮಾಜದಲ್ಲಿ ವಿಭಜನೆಯ ವಾತಾವರಣ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಯುವಕರು ಒಂದಾಗಿ ಗಣೇಶೋತ್ಸವ ಆಚರಿಸುತ್ತಿರುವುದು ಸಹಬಾಳ್ವೆ, ಸ್ನೇಹ, ಸೌಹಾರ್ದತೆ ಹಾಗೂ ಭಾವೈಕ್ಯತೆಯ ಸಂದೇಶವನ್ನು ಸಾರುತ್ತಿದೆ.

ಗಣೇಶೋತ್ಸವವನ್ನು ಕೇವಲ ಧಾರ್ಮಿಕ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಪರಸ್ಪರ ಗೌರವ, ಸಹೋದರತ್ವ ಮತ್ತು ಸಮಾನತೆಯ ಮನೋಭಾವ ಬೆಳೆಸುವ ವೇದಿಕೆಯನ್ನಾಗಿ ಬಳಸಿಕೊಳ್ಳುವ ಪ್ರಯತ್ನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಕುರಿತು 3ನೇ ವಾರ್ಡ್ ಪುರಸಭೆ ಸದಸ್ಯೆ ಭಾಗ್ಯಶ್ರೀ ಕೇಶವಮೂರ್ತಿ ದಾಸರ ಹಾಗೂ ಗಜಕೇಸರಿ ಮಿತ್ರ ಮಂಡಳಿಯ ಯುವಕರು ಎಲ್ಲರೂ ಜಾತಿ–ಧರ್ಮದ ಭೇದ ಮರೆತು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುವ ಅಗತ್ಯವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂತೋಷ್ ಬಳಿಗಾರ್, ಯಮನೂರ್ ಗೌಡ, ಇಮಾಮ್ ಸಾಬ್ ಕಾತರ್ಕಿ, ರವಿಕುಮಾರ್, ಇಬ್ರಾಹಿಂ, ಸತ್ಯ, ನವೀನ್ ಕುಮಾರ್, ದಾವೂದ್, ಮೆಹಬೂಬ್ ಸಾಬ್, ಅಜ್ಮೀರ್ ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.




Tags

MaskiGaneshaRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X