Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಸ್ಕಿ ತಾಲೂಕಿಗೆ ಪ್ರತ್ಯೇಕ...

ರಾಯಚೂರು | ಮಸ್ಕಿ ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರಕ್ಕೆ ಅಧಿಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Oct 2025 9:19 PM IST
share
ರಾಯಚೂರು | ಮಸ್ಕಿ ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರಕ್ಕೆ ಅಧಿಸೂಚನೆ

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಾಗಿ 8 ವರ್ಷಗಳ ನಂತರ ಮಸ್ಕಿ ಸ್ಥಳೀಯ ಯೋಜನಾ ಪ್ರಾಧಿಕಾರ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಮಸ್ಕಿ ಪುರಸಭೆ ವ್ಯಾಪ್ತಿ ಪ್ರದೇಶ ಸೇರಿ ತಾಲೂಕಿನ ಸಾನಬಾಳ, ಹೀರೆಕಡಬೂರು, ಚಿಕ್ಕಕಡಬೂರು, ಸಂಕನೂರು, ಗುಡುದೂರು, ಪರಾಪುರು, ನಾಗರಬೆಂಚಿ, ಹಿರೇಅಂತರಗಂಗಿ ವೆಂಕಟಾಪುರು ಮತ್ತು ಮುದಬಾಳ ಗ್ರಾಮಗಳು ಮಸ್ಕಿ ಸ್ಥಳೀಯ ಯೋಜನಾ ಪ್ರಾಧಿಕಾರ ವ್ಯಾಪ್ತಿಗೆ ಸರಹದ್ದು ನಿಗಧಿಪಡಿಸಲಾಗಿದೆ.

ಹೊಸದಾಗಿ ತಾಲೂಕುಗಳಾಗಿ ಘೋಷಣೆಯಾದ ಅನೇಕ ತಾಲೂಕು ಕೇಂದ್ರಗಳಿಗೆ ಸ್ಥಳೀಯ ಯೋಜನಾ ಪ್ರಾಧಿಕಾರ ರಚನೆ ಬಾಕಿ ಉಳಿದಿದ್ದವು. 2017 ರಲ್ಲಿ ಮಸ್ಕಿ ತಾಲೂಕು ಕೇಂದ್ರವಾಗಿ ಘೋಷಿಸಲಾಗಿತ್ತು. 2018 ಜನವರಿಯಿಂದ ಮಸ್ಕಿ ತಾಲೂಕು ಕೇಂದ್ರವಾಗಿ ಕಾರ್ಯಾರಂಭ ಮಾಡಿತ್ತು. ಅಲ್ಲಿಂದ ಇಲ್ಲಿಯವರಗೆ ನಗರ ಯೋಜನಾ ಪ್ರಾಧಿಕಾರ ರಚನೆಯಾಗದೇ ಇರುವರಿಂದ ಲಿಂಗಸೂಗೂರು ತಾಲೂಕಿನ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸೇವೆ ಪಡೆಯುವಂತಾಗಿತ್ತು.

ಪ್ರತ್ಯೇಕವಾಗಿ ಮಸ್ಕಿ ಯೋಜನಾ ಪ್ರಾಧಿಕಾರಕ್ಕೆ ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿ ಯೋಜನಾ ಪ್ರಾಧಿಕಾರ ಸಮಿತಿ ರಚಿಸಬೇಕಿರುವುದು ಬಾಕಿಯಿದೆ. ಅಲ್ಲಿಯವರಗೆ ಮಾನವಿ ಯೋಜನಾ ಪ್ರಾಧಿಕಾರದೊಂದಿಗೆ ಅನುಮೋದಿತ ವಲಯಗಳೊಂದಿಗೆ ನಿಯಮಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

ಮಹಾಯೋಜನೆ :

ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದಿರುವ ಮಸ್ಕಿ ಸ್ಥಳೀಯ ಯೋಜನಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಇತರೆ ಸಮಿತಿ ಸದಸ್ಯರುಗಳನ್ನು ರಚಿಸುವುದು ಬಾಕಿಯಿದೆ. ಸಮಿತಿ ಪೂರ್ಣ ರಚನೆಯ ನಂತರ ಮಹಾಯೋಜನೆ(ಮಾಸ್ಟರ್ ಪ್ಲಾನ್) ರಚಿಸಿ ಅನುಮೋದನೆ ನಂತರವಷ್ಟೇ ಪೂರ್ಣಪ್ರಮಾಣದಲ್ಲಿ ಕಚೇರಿ ಅಸ್ತಿತ್ವಕ್ಕೆ ಬರಲಿದೆ. ಯೋಜನಾ ಪ್ರಾಧಿಕಾರ ಕಾರ್ಯದರ್ಶಿಯಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕ ಕಾರ್ಯದರ್ಶಿಯಾಗಿ, ಮಸ್ಕಿ ಪುರಸಭೆ ಮುಖ್ಯಾಧಿಕಾರಿ ಮತ್ತು ಒಬ್ಬ ಪುರಸಭೆ ಸದಸ್ಯ ಸದಸ್ಯರುಗಳಾಗಿ ಕಾರ್ಯನಿರ್ವಹಿಸಬೇಕಿದ್ದು, ಮೂರು ಜನ ಇತರೆ ಸದಸ್ಯರು ಹಾಗೂ ಅಧ್ಯಕ್ಷರನ್ನು ನಗರಾಭಿವೃದ್ದಿ ಇಲಾಖೆ ನೇಮಿಸಬೇಕಿದೆ.

ಹೊಸ ತಾಲೂಕು ಕೇಂದ್ರವಾಗಿ ಘೋಷಣೆಯಾದಾಗಿನಿಂದ ಅನೇಕ ಪ್ರಗತಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ತಾಲೂಕು ಆಡಳಿತ ಸೌಧದಿಂದ ಹಿಡಿದು ನ್ಯಾಯಾಲಯ, ಎಲ್ಲ ಕಚೇರಿಗಳ ಪ್ರಾರಂಭವಾಗದೇ ಹೋಗಿರುವಾಗ ಸ್ಥಳೀಯ ಯೋಜನಾ ಪ್ರಾಧಿಕಾರ ಮಂಜೂರಾತಿ ದೊರೆಕಿದ್ದು, ಕಾರ್ಯಾರಂಭ ವೇಗ ಪಡೆಯಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X