Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಪ.ಜಾ., ಪ.ಪಂ. ಮೇಲಿನ...

Raichur | ಪ.ಜಾ., ಪ.ಪಂ. ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಡಿಸಿ ಪೂವಿತಾ ಎಸ್.

ವಾರ್ತಾಭಾರತಿವಾರ್ತಾಭಾರತಿ12 Nov 2026 7:05 PM IST
share
Raichur  | ಪ.ಜಾ., ಪ.ಪಂ. ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಡಿಸಿ ಪೂವಿತಾ ಎಸ್.

ರಾಯಚೂರು : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾಗೃತ ಹಾಗೂ ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಗುರಿಯನ್ನು ನಿಗದಿತ ಅವಧಿಯೊಳಗೆ ತಲುಪಬೇಕು. ಸಮಿತಿಯು ಶಿಫಾರಸು ಮಾಡಿದ ಪಟ್ಟಿಯನ್ನು ಅಂತಿಮಗೊಳಿಸಬೇಕು. ಅಲ್ಲದೆ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ದೊರೆಯುವ ವಸತಿ, ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರಧನ ವಿತರಣೆಯಲ್ಲಿ ವಿನಾಕಾರಣ ವಿಳಂಬ ಮಾಡಬಾರದು. ಪರಿಶಿಷ್ಟ ಸಮುದಾಯದ ಕಾಲೋನಿಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಿ, ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.

ಫಲಾನುಭವಿಗಳಿಗೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗದ ಕಾರಣ ಸಲ್ಲಿಕೆಯಾಗಿರುವ ಎಲ್ಲ ಪ್ರಸ್ತಾವನೆಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಕೆಲವು ಗ್ರಾಮಗಳಲ್ಲಿ ಎಲ್ಲ ಸಮುದಾಯಗಳ ಮುಖಂಡರೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು. ಈ ಕುರಿತು ಆಯಾ ಗ್ರಾಮಗಳ ಎಲ್ಲ ಸಮುದಾಯದ ಜನರಿಗೆ ಡಂಗೂರ ಸಾರುವ ಮೂಲಕ ಮಾಹಿತಿ ನೀಡಿ, ಎಲ್ಲರನ್ನೂ ಒಗ್ಗೂಡಿಸಿ ಸಭೆ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಮಾತನಾಡಿ, ಪ್ರತಿ ಬುಧವಾರ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶಾಂತಿ ಪಾಲನಾ ಸಭೆಗಳನ್ನು ನಡೆಸುವ ಮೂಲಕ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುವ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಜನರಿಗೆ ಮಾಹಿತಿ ನೀಡುತ್ತಿದ್ದಾರೆ. ಅಲ್ಲದೆ, ಪ್ರತಿ ಭಾನುವಾರ ಪೊಲೀಸ್ ಠಾಣೆಗಳಲ್ಲಿಯೂ ಸಭೆಗಳನ್ನು ನಡೆಸಲಾಗುತ್ತಿದೆ. ಒಂದು ವೇಳೆ ಸಭೆ ನಡೆಸದ ಪೊಲೀಸ್ ಠಾಣೆಗಳಿದ್ದರೆ, ಅವುಗಳ ಮಾಹಿತಿಯನ್ನು ತಮಗೆ ನೀಡಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ ಅವರು ಹಿಂದಿನ ಸಭೆಯ ನಡಾವಳಿಗಳನ್ನು ಓದಿದರು.

ಸಭೆಯಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಸಮಿತಿ ಸದಸ್ಯರಾದ ರವೀಂದ್ರ ಜಲ್ದಾರ್, ಕೆ.ಇ. ಕುಮಾರ್, ಹೇಮರಾಜ್ ಅಸ್ಕಿಹಾಳ್, ಎನ್. ರಘುವೀರ್ ನಾಯಕ, ಡಾ. ರವಿಕುಮಾರ್ ಅಸ್ಕಿಹಾಳ್, ಪವನ್ ಕಿಶೋರ್ ಪಾಟೀಲ್, ಬಸವರಾಜ ನಕ್ಕುಂದಿ, ಟಿ. ಸುಧಾಮ, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ. ಬಿ.ಕೆ. ರಮೇಶ, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹ್ಮದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X