Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಮಕ್ಕಳ ರಕ್ಷಣಾ ಕಾಯ್ದೆಗಳ...

Raichur | ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ13 Nov 2025 8:24 PM IST
share
Raichur | ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ
ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: ವೆಂಕಟೇಶ

ರಾಯಚೂರು : ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ದಿಸೆಯಲ್ಲಿ ಮಕ್ಕಳ ಹಕ್ಕುಗಳನ್ನು ಸುಲಭವಾಗಿ ಅನುಷ್ಠಾನಗೊಳಿಸಲು ಕಾಯ್ದೆಗಳನ್ನು ಅರಿತುಕೊಳ್ಳಬೇಕು. ಇದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ಕೊಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ ಅವರು ಹೇಳಿದರು.

ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನ.13ರಂದು ನಡೆದ ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸ ಕಾಯ್ದೆ-2012 ಹಾಗೂ ದತ್ತು ನಿಯಾಮವಳಿಗಳು-2022ರ ಕುರಿತು ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮಲ್ಲಿರುವ ಕಾನೂನುಗಳು ಮಾನವೀಯ ಮೌಲ್ಯಗಳಿಂದ ಕೂಡಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳುವಂತೆ ಕಾನೂನುಗಳ ಸಮರ್ಪಕ ಅನುಷ್ಠಾನವು ನಮ್ಮಲ್ಲಿನ ಇಚ್ಛಾಶಕ್ತಿಯ ಮೇಲೆ ನಿಂತಿದೆ ಎಂದು ತಿಳಿಸಿದರು.

ಬಾಲ್ಯ ವಿವಾಹ, ಭಿಕ್ಷಾಟನೆ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಜಿಲ್ಲೆಯಲ್ಲಿ ಶೂನ್ಯಕ್ಕಿಳಿಯುವ ದಿಸೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಕೇವಲ ಒಂದು ದಿನ ಅಥವಾ ಸಹಾಯವಾಣಿ ಕರೆಗಳು ಬಂದಾಗ ಮಾತ್ರ ಕಾರ್ಯಾಚರಣೆ ನಡೆಸಬಾರದು. ನಿತ್ಯ ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳಬೇಕು. ಮಕ್ಕಳ ರಕ್ಷಣೆಯ ಜವಾಬ್ದಾರಿಯು ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ್ದಾಗಿ ಎಂದು ಯಾರು ತಿಳಿಯಬಾರದು. ಮಕ್ಕಳ ರಕ್ಷಣೆಗೆ ಬೇರೆ ಬೇರೆ ಇಲಾಖೆಗಳು ಸಹ ಕೈಜೋಡಿಸಬೇಕು. ಮುಖ್ಯವಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದರು.

ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಸಿ.ಐ.ಡಿ. ಕಚೇರಿಯ ಪೊಲೀಸ್ ತರಬೇತುದಾರರಾದ ರೋಹಿತ್ ಸಿ.ಜೆ. ಅವರು ಮಾತನಾಡಿ, ಮಕ್ಕಳ ವಲಸೆ, ಗುಳೆ, ಮಕ್ಕಳ ಸಾಗಾಣಿಕೆ, ಮಕ್ಕಳ ಭಿಕ್ಷಾಟನೆ ನಿರ್ಮೂಲನೆ, ಪೊಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ-2015, ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಬಿಕ್ಷಾಟನೆ ನಿರ್ಮೂಲನೆ ಕುರಿತು ಮಾಹಿತಿ ನೀಡಿದರು.

ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಬಾಲ ಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಒಂಟಿ ಮಕ್ಕಳು, ಮಾದಕ ವ್ಯಸನಿ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ಅತ್ಯಾಚಾರ, ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ತಕ್ಷಣವೇ 1098 ಅಥವಾ 112 ಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಪೋಸ್ಟರ್ ಬಿಡುಗಡೆ :

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರ ವತಿಯಿಂದ ದತ್ತು ಪ್ರಕ್ರಿಯೆ ಹಾಗೂ 1098 ಮಕ್ಕಳ ಸಹಾಯವಾಣಿ ಪೋಸ್ಟರ್‌ಗಳನ್ನು ವಿವಿಧ ಗಣ್ಯರಿಂದ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜಿಲ್ಲಾ ಸದಸ್ಯರಾದ ಜಯ ಸುಧಾರಾಣಿ, 1ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಯು.ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಅಮರೇಶ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿ, ಸಿಬ್ಬಂದಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X