Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ...

Raichur | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ17 Jun 2026 7:13 PM IST
share
Raichur | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ
ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್‌ಒ, ಸಾರ್ವಜನಿಕ ಶಾಲೆ ಉಳಿಸಿ ಸಮಿತಿಯಿಂದ ಪ್ರತಿಭಟನೆ

ರಾಯಚೂರು : ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಯನ್ನು ಖಂಡಿಸಿ ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಾಲೆ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಅನುಷ್ಠಾನದಿಂದ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದರು. ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವುದು ಅಥವಾ ಮುಚ್ಚುವುದು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣ ಹಕ್ಕಿಗೆ ಹೊಡೆತ ನೀಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಂದ್ರೂನ್ ಖಿಲ್ಲಾ, ಕೋಟೆಯ ಬಾಲಕಿಯರ ಉರ್ದು ಪ್ರೌಢಶಾಲೆ, ಅಸ್ಕಿಹಾಳ, ಆಶ್ರಯ ಕಾಲೋನಿ, ಶ್ರೀರಾಮನಗರ ಕ್ಯಾಂಪ್, ವಿಜಯನಗರ ಕ್ಯಾಂಪ್, ಗೋಲ್ ಮಾರ್ಕೆಟ್, ದೇವರ ಕಾಲೋನಿ, ಕುಲಸುಂಬಿ ಕಾಲೋನಿ ಹಾಗೂ ಮಲಿಯಾಬಾದ್ ಕ್ಯಾಂಪ್ ಸೇರಿದಂತೆ ವಿವಿಧ ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾವನೆಗಳನ್ನು ತಕ್ಷಣ ಕೈಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಅಸ್ಕಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು. ಅಲ್ಲಿಯವರೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಜಯನಗರ ಕ್ಯಾಂಪ್ ಸರ್ಕಾರಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಹಳೆಯ ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಹೊಸ ಕಟ್ಟಡ ನಿರ್ಮಾಣವಾಗುವವರೆಗೆ ಸುರಕ್ಷಿತ ಸ್ಥಳದಲ್ಲಿ ತರಗತಿಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಖಾಲಿ ಇರುವ 5,624 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಏಕೋಪಾಧ್ಯಾಯ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಿ ಶಿಕ್ಷಣದ ಗುಣಮಟ್ಟ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನೂ ಪ್ರಸ್ತಾಪಿಸಿದ ಪ್ರತಿಭಟನಾಕಾರರು, ದುಸ್ಥಿತಿಯಲ್ಲಿರುವ 874 ಶಾಲಾ ಶೌಚಾಲಯಗಳನ್ನು ತುರ್ತಾಗಿ ದುರಸ್ತಿಗೊಳಿಸಬೇಕು ಹಾಗೂ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಚನ್ನಬಸವ ಜಾನಕಲ್, ಮಹೇಶ್, ಸೂರ್ಯನಾರಾಯಣ, ಶಿವಪ್ಪ, ರವಿಕುಮಾರ್, ಬಸವರಾಜ್ ಸೇರಿದಂತೆ ವಿವಿಧ ಗ್ರಾಮಗಳ ಪೋಷಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X