Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಲೋಕ್ ಅದಾಲತ್ ನಲ್ಲಿ ರಾಜಿ...

ರಾಯಚೂರು | ಲೋಕ್ ಅದಾಲತ್ ನಲ್ಲಿ ರಾಜಿ ಸಂದಾನದ ಮೂಲಕ ಬಾಕಿ ಪ್ರಕರಣ ಇತ್ಯಾರ್ಥ : ನ್ಯಾ.ಮಾರುತಿ ಬಾಗಡೆ

ವಾರ್ತಾಭಾರತಿವಾರ್ತಾಭಾರತಿ13 Sept 2025 6:12 PM IST
share
ರಾಯಚೂರು | ಲೋಕ್ ಅದಾಲತ್ ನಲ್ಲಿ ರಾಜಿ ಸಂದಾನದ ಮೂಲಕ ಬಾಕಿ ಪ್ರಕರಣ ಇತ್ಯಾರ್ಥ : ನ್ಯಾ.ಮಾರುತಿ ಬಾಗಡೆ

ರಾಯಚೂರು: ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಕಕ್ಷಿದಾರರನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವ ಪ್ರಯತ್ನ ಮಾಡಲಾಗುತ್ತಿದೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಬಾಗಡೆ ಹೇಳಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಈ ವರ್ಷದ ಮೂರನೇ ಲೋಕ ಅದಾಲತ್ ಇಂದು ನಡೆದಿದೆ. ಈವರೆಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. 25 ಲಕ್ಷಕ್ಕೂ ಹೆಚ್ಚಿನ ಹಣವನ್ನು ರಾಜಿ ಸಂಧಾನದಲ್ಲಿ ಪಾವತಿ ಮಾಡಿಸಲಾಗಿದೆ. ಪ್ರಮುಖವಾಗಿದ್ದ ಆಸ್ತಿ ಮಾರಾಟದ ವ್ಯಾಜ್ಯವೂ ರಾಜಿಯಾಗಿದೆ ಎಂದರು.

ವಿಚಾರಣೆಗೆ ಬಾಕಿ ಇರುವ 5,000 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆಯಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು 25,000 ಮೇಲ್ಪಟ್ಟು ಇತ್ಯರ್ಥಪಡಿಸಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಸಹಕಾರದಿಂದ ಹೆಚ್ಚಿನ ಪ್ರಕರಣ ಇತ್ಯರ್ಥಗೊಳಿಸಗುತ್ತದೆ ಎಂದು ತಿಳಿಸಿದರು.

ಡಿಸೆಂಬರ್‌ನಲ್ಲಿ ಮತ್ತೊಂದು ರಾಷ್ಟೀಯ ಲೋಕ ಅದಾಲತ್ ಏರ್ಪಡಿಸಲಾಗುವುದು. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡದಲ್ಲಿ ಶೇ.50 ರಷ್ಟು ರಿಯಾಯತಿ ನೀಡಲಾಗಿದೆ. ಕರ್ನಾಟಕದ ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಲೋಕ ಅದಾಲತ್ ನಡೆಯುತ್ತಿದೆ. ಅದೇ ರೀತಿಯಾಗಿ ಹೊರ ರಾಜ್ಯಗಳಲ್ಲಿಯೂ ಕೂಡ ಲೋಕ್ ಅದಾಲತ್, ರಾಜಿ ಮಾಡಲು ಪ್ರಯತ್ನ ಮಾಡಲಾಗುತ್ತದೆ. ಆದರೆ ಒಂದೇ ದಿನದಲ್ಲಿ ರಾಜಿಯಾಗುವುದಿಲ್ಲ. ನ್ಯಾಯಾಧೀಶರೂ ರಾಜಿ ಮಾಡಲು ಪ್ರಯತ್ನಿಸುತ್ತಾರೆ. ಸಾರ್ವಜನಿಕರೂ ಕೂಡ ಲೋಕ್ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಮದ್ಯಾಹ್ನ 1 ಗಂಟೆಯವರೆಗೆ ಸಿವಿಲ್, ಕ್ರಿಮಿನಲ್, ಮೋಟಾರು ವಾಹನ ಪ್ರಕರಣ ಹಾಗೂ ಕುಟುಂಬ ನ್ಯಾಯಾಲಯದ ಒಟ್ಟು ಸುಮಾರು 1,500 ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಇದೇ ವೇಳೆ ಆಸ್ತಿ ವಿಚಾರವಾಗಿ ಒಂದು ವರ್ಷದಿಂದ ನಡೆಯುತ್ತಿದ್ದ ಹಾಗೂ ಬಾಕಿ ಇದ್ದ ಒಂದು ಸಿವಿಲ್ ಪ್ರಕರಣವನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಗೊಳಿಸಲಾಯಿತು. ಆಸ್ತಿಯಲ್ಲಿ ಹಿಸ್ಸಾಗಳನ್ನು ಪ್ರತ್ಯೇಕ ಮಾಡಿ, ಆಸ್ತಿಯನ್ನು ಹಂಚಲಾಯಿತು. ಆಸ್ತಿಗಳ ಜೊತೆಗೆ ಕೆಲವೊಂದು ಹಣದ ಮಾತುಕತೆಯೂ ಆಗಿದ್ದು, ಆಯಾ ಕಕ್ಷಿದಾರರಿಗೆ ಹಣವನ್ನು ಕೊಡಿಸಿ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಇದರ ಜೊತೆಗೆ ಟ್ರೇಡ್ ಮಾರ್ಕ್ ಕಾಯ್ದೆಯಡಿ ಹೂಡಲಾಗಿದ್ದ ದಾವೆಯನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎನ್.ಸಾತ್ವಿಕ್, ವಕೀಲರು, ಕಕ್ಷೀದಾರರು, ನ್ಯಾಯಾಲಯ ಸಿಬ್ಬಂದಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಜೊತೆಗೆ ಪೊಲೀಸರು ಇದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X