Raichur | ಶಾಂತಿಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆ ಸೂಚನೆ
ಗಣೇಶ ಮಂಡಳಿ ಮುಖ್ಯಸ್ಥರು, ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಪಾಲನಾ ಸಭೆ

ರಾಯಚೂರು : ಮುಂಬರುವ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಮುದಾಯಗಳ ಮುಖಂಡರು ಹಾಗೂ ಗಣೇಶ ಮಂಡಳಿ ಮುಖ್ಯಸ್ಥರೊಂದಿಗೆ ಶಾಂತಿ ಪಾಲನಾ ಸಭೆ ನಡೆಯಿತು.
ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬವನ್ನು ಆಚರಿಸಲು ಅಗತ್ಯ ಸಲಹೆ-ಸೂಚನೆಗಳನ್ನು ಪೊಲೀಸ್ ಇಲಾಖೆ ನೀಡಿತು. ಸಾರ್ವಜನಿಕರು ಪರಸ್ಪರ ಸಹಕಾರ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ಎಸ್‌ಪಿ ಮನವಿ ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಉಪ ಪೊಲೀಸ್ ಅಧೀಕ್ಷಕ ಶಾಂತವೀರ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story




