Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಜಿಲ್ಲಾದ್ಯಂತ ಡ್ರಗ್ಸ್ ದಂಧೆ,...

ರಾಯಚೂರು: ಜಿಲ್ಲಾದ್ಯಂತ ಡ್ರಗ್ಸ್ ದಂಧೆ, ಅಪರಾಧ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ; 4 ದಿನಗಳಲ್ಲಿ 2016 ಪ್ರಕರಣ ದಾಖಲು

ಮಾದಕ ವಸ್ತುಗಳ ನಿಗ್ರಹ ಕಾರ್ಯಪಡೆ ರಚನೆ

ವಾರ್ತಾಭಾರತಿವಾರ್ತಾಭಾರತಿ31 Oct 2026 11:09 AM IST
share
ರಾಯಚೂರು: ಜಿಲ್ಲಾದ್ಯಂತ ಡ್ರಗ್ಸ್ ದಂಧೆ, ಅಪರಾಧ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ; 4 ದಿನಗಳಲ್ಲಿ 2016 ಪ್ರಕರಣ ದಾಖಲು

ರಾಯಚೂರು: ಜಿಲ್ಲೆಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಹಾವಳಿ, ಅಕ್ರಮ ಮದ್ಯ ಮಾರಾಟ, ಮೋಟರ್ ವಾಹನ ಕಾಯ್ದೆ, ಸಾರ್ವಜನಿಕರ ಶಾಂತಿ ಭಂಗ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಕಾರ್ಯಾಚರಣೆ ನಡೆಸಿದೆ. ಅ.27ರಿಂದ 30ರ ವರೆಗೆ ರಾಯಚೂರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 2016 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ಆರು ತಂಡಗಳು ಈ ಕಾರ್ಯಾಚರಣೆ ನಡೆಸಿವೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ಗಾಂಜಾ ಹಾಗೂ ಮಾದಕವಸ್ತುಗಳ ಸೇವನೆಯಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಅದರ ನಿಯಂತ್ರಣಕ್ಕಾಗಿ ಖಾಕಿ ಪಡೆ ಚುರುಕಾಗಿ ಕೆಲಸ ಮಾಡುತ್ತಿದೆ.

ಮಾದಕ ವಸ್ತು ಸೇವನೆ ಅನುಮಾನದ ಮೇಲೆ 50 ಜನರ ತಪಾಸಣೆ ಮಾಡಿದ್ದು, ಇಬ್ಬರು ಮಾದಕ ವಸ್ತುಗಳು ಸೇವನೆ ಮಾಡಿದ್ದು ಸಾಬೀತಾಗಿ ಎರಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಮದ್ಯ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡಿದ ಮಾಹಿತಿ ಮೇರೆಗೆ ಅಬಕಾರಿ ಕಾಯ್ದೆಯಡಿ 12 ಪ್ರಕರಣ ದಾಖಲು, 102 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ 42 ಪ್ರಕರಣ ದಾಖಲಿಸಲಾಗಿದೆ. ಮೋಟರ್ ವಾಹನ ಕಾಯ್ದೆಯಡಿ 895 ಪ್ರಕರಣ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ಮೇಲೆ 42 ಪ್ರಕರಣ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ಮಾಡಿದ ಆರೋಪದ ಕೊಟ್ಪಾ ಕಾಯ್ದೆಯಡಿ 194 ಪ್ರಕರಣ ದಾಖಲಿಸಿದ್ದಾರೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ, ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಕೆ.ಪಿ ಕಾಯ್ದೆಯ ಕಲಂ 92 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶುಗಿರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಎನ್ಟಿಎಫ್ ತಂಡ ಉದ್ಘಾಟನೆ: ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಾಂತವೀರರನ್ನು ಒಳಗೊಂಡ ಮಾದಕವಸ್ತುಗಳ ವಿರುದ್ಧ ವಿಶೇಷ ಮಾಹಿತಿಯುಳ್ಳ ಎಂಟು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದೆ. ಶನಿವಾರ ಏಕ್ತಾ ದಿವಸ್ ಅಂಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಪರೇಡ್ ನಡೆಸಿ ನಂತರ ತಂಡಕ್ಕೆ ಚಾಲನೆ ನೀಡಲಾಯಿತು.

ಈ ತಂಡ ವಿಶೇಷ ಸಮವಸ್ತ್ರ, ಮತ್ತು ವಾಹನದೊಂದಿಗೆ ಶಾಲಾ ಕಾಲೇಜುಗಳಿಗೆ ಭೇಟಿ ಮಾದಕವಸ್ತುಗಳ ಕುರಿತು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೆ ಸಂಜೆ 5ರಿಂದ ರಾತ್ರಿ 9 ಗಂಟೆವರೆಗೆ ಆ್ಯಂಟಿ ನಾರ್ಕೊಟಿಕ್ ಟಾಸ್ಕ್ ಫೋರ್ಸ್ (ANTF) ತಂಡ ಶನಿವಾರ ಉದ್ಘಾಟನೆ ಮಾಡಲಾಗಿದೆ. ಆಯಾ ಠಾಣೆಯ ಪಿಎಸ್ಐ ಗಳು, ಸಿಪಿಐಗಳು ತಂಡಗಳ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಎಸ್ಪಿ ಅವರು ಮಾಹಿತಿ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಡಿವೈಎಸ್ ಪಿ ಶಾಂತವೀರ ಈ, ಸದರ್ ಬಜಾರ್ ಸಿಪಿಐ ಉಮೇಶ್ ಕಾಂಬ್ಳೆ ಸೇರಿದಂತೆ ವಿವಿಧ ಠಾಣೆಯ ಪಿಎಸ್ಸೈ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

RaichurPoliceAgainst Drug Racket
share
ವಾರ್ತಾಭಾರತಿ
ವಾರ್ತಾಭಾರತಿ
Next Story
X