Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪೊಲೀಸರು ಮಾನಸಿಕ ಆರೋಗ್ಯ...

ರಾಯಚೂರು | ಪೊಲೀಸರು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು : ಎಸ್ಪಿ ಪುಟ್ಟಮಾದಯ್ಯ

ವಾರ್ತಾಭಾರತಿವಾರ್ತಾಭಾರತಿ26 Oct 2025 10:51 PM IST
share
ರಾಯಚೂರು | ಪೊಲೀಸರು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು : ಎಸ್ಪಿ ಪುಟ್ಟಮಾದಯ್ಯ

ರಾಯಚೂರು: ಸಮಾಜದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಅದಕ್ಕೆ ಘಟನೆಗೆ ಕಾರಣವಾದ ವ್ಯಕ್ತಿಯ ಮನಸ್ಸು ಹಾಗೂ ಬುದ್ದಿ ಶಕ್ತಿ ಮುಖ್ಯವಾಗಿರುತ್ತದೆ. ಮಾನಸಿಕ ಆರೋಗ್ಯ ಕಾಯ್ದೆಯಲ್ಲಿ ಈ ಕುರಿತು ಅನೇಕ ಕಾನೂನು ನಿಯಮಗಳಿದ್ದು, ಅವುಗಳನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಹೇಳಿದರು.

ಅವರಿಂದು ನಗರದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ 2017ರ ಕಾನೂನು ನಿಯಮಗಳ ಕುರಿತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಯಾ ಠಾಣೆಯ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥರು ಕಂಡುಬಂದಲ್ಲಿ ಪೊಲೀಸರು ಏನು ಮಾಡಬೇಕು ಎಂಬುವುದು ಬಹಳ ಮುಖ್ಯವಾಗಿರುತ್ತದೆ. ಸಮಾಜದಲ್ಲಿ ಒಬ್ಬ ವ್ಯಕ್ತಿಯಿಂದ ಅಶಾಂತಿ ಉಂಟಾದಲ್ಲಿ ಮೊದಲು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಏಕೆಂದರೆ ಮನುಷ್ಯ ಮಾನಸಿಕವಾಗಿ ಖಿನ್ನತೆಗೆ ಒಳಗಾದಾಗ ಆ ವ್ಯಕ್ತಿ ಸಮಾಜಕ್ಕೆ ಹಾನಿ ಉಂಟು ಮಾಡುವುದು ಮತ್ತು ಸಮಾಜಕ್ಕೆ ಅಪಾಯವಾಗುವಂತೆ ನಡೆದುಕೊಳ್ಳುತ್ತಾನೆ. ಆದ್ದರಿಂದ ಮೊದಲು ಆ ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥರು ಕಂಡುಬಂದಲ್ಲಿ ಅಥವಾ ಸಾರ್ವಜನಿಕರು ಅವರ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಮೊದಲು ಆ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕು. ಆ ನಂತರ ಠಾಣೆಯ ಲಾಕಪ್‍ನಲ್ಲಿ ಹಾಕದೇ ಆ ವ್ಯಕ್ತಿಯ ವಾರಸುದಾರರ ಪತ್ತೆಗೆ ಮುಂದಾಗಬೇಕು. ಒಂದು ವೇಳೆ ಆ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಗದಿದ್ದಲ್ಲಿ ಕಾಣೆಯಾದ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಕಾಯ್ದೆಯ ಕುರಿತು ಉಪನ್ಯಾಸ ನೀಡಿದ ರಿಮ್ಸ್ ಆಸ್ಪತ್ರೆ ಮಾನಸಿಕ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಡಾ.ರಮೇಶಬಾಬು ಮಾತನಾಡಿ, ಮಾನವನ ಪ್ರತಿಯೊಂದು ಕೋಶದಲ್ಲಿಯೂ ಮನಸ್ಸು ಇರುತ್ತದೆ. ಮನಸ್ಸು ಹೃದಯ ಅಥವಾ ತಲೆಯಲ್ಲಿರುವುದಿಲ್ಲ. ಆದ್ದರಿಂದ ನಿಮ್ಮ ನೀವು ಮೊದಲು ಅರ್ಥೈಸಿಕೊಳ್ಳಬೇಕು. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆಯೂ ಸಮುದಾಯದ ಪಾಲ್ಗೊಳ್ಳುವಿಕೆಯ ಆಧಾರದ ಮೇಲೆ ನಿಂತಿದೆ ಪ್ರತಿಯೊಬ್ಬರೂ ಕಾಯ್ದೆಯ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾನಸಿಕ ರೋಗ ತಜ್ಞರಾದ ಅನಿಲ್ ಗುಮಾಸ್ತೆ, ಸ್ನೇಹ, ಮಂಜುಳಾ, ಶ್ರೀಕಾಂತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹರೀಶ, ಕುಮಾರ ಸ್ವಾಮಿ, ಡಿವೈಎಸ್‍ಪಿ ಶಾಂತವೀರ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐಗಳು, ಪಿಎಸ್‍ಐಗಳು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X