Raichur | ಜು.12ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ರಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಗಿಲ್ಲೇಸೂಗೂರು ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜು.12ರ ಬೆಳಗ್ಗೆ 8ಗಂಟೆಯಿಂದ ಸಾಯಂಕಾಲ 5ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




