Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಪಿಯು ಪರೀಕ್ಷೆ ವ್ಯವಸ್ಥಿತ,...

ಪಿಯು ಪರೀಕ್ಷೆ ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಎಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Feb 2026 3:56 PM IST
share
ಪಿಯು ಪರೀಕ್ಷೆ ವ್ಯವಸ್ಥಿತ, ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಎಡಿಸಿ ಸೂಚನೆ
ರಾಯಚೂರು: ಪರೀಕ್ಷೆ ಸಿದ್ಧತೆಯ ಪೂರ್ವಭಾವಿ ಸಭೆ

ರಾಯಚೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆ.28ರಿಂದ ಆರಂಭವಾಗಿ ಮಾರ್ಚ 17ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತು ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿರದಂತೆ, ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯನತೆಯನ್ನು ಕಾಪಾಡಬೇಕು. ಪರೀಕ್ಷಾ ಕೇಂದ್ರಗಳ ಚಲನವಲನಕ್ಕೆ ಸಂಬಂಧಿಸಿದಂತೆ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದರು.

ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಆರೋಗ್ಯ ಇಲಾಖೆಯಿಂದ ಶುಶ್ರೂಷಕರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಲಾಗುತ್ತದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.

ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮುಶೇಖರಪ್ಪ ಹೋಕ್ರಾಣಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 22,442 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 18,419 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 560 ಖಾಸಗಿಯಾಗಿ ಹಾಗೂ 3,450 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ 43 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆ ಕೇಂದ್ರಗಳು: ರಾಯಚೂರು ತಾಲೂಕಿನಲ್ಲಿ 13, ಲಿಂಗಸುಗೂರು 07, ದೇವದುರ್ಗ 05, ಸಿಂಧನೂರು 09, ಮಾನವಿ 05, ಮಸ್ಕಿ 02, ಸಿರವಾರ 02 ಸೇರಿದಂತೆ ಒಟ್ಟು 43 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

Tags

Raichuruexam preparation meeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X