Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನೂತನ ಈದ್ಗಾ ಮರು ಉದ್ಘಾಟನೆಗೆ...

Raichur | ನೂತನ ಈದ್ಗಾ ಮರು ಉದ್ಘಾಟನೆಗೆ ಸಿದ್ಧತೆ; ಸ್ಥಳೀಯ ಮುಸ್ಲಿಂ ಮುಖಂಡರ ಅಸಮಾಧಾನ, ಸ್ಥಳೀಯರನ್ನು ಕಡೆಗಣಿಸಿದ ಆರೋಪ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ27 Nov 2026 11:55 PM IST
share
Raichur | ನೂತನ ಈದ್ಗಾ ಮರು ಉದ್ಘಾಟನೆಗೆ ಸಿದ್ಧತೆ; ಸ್ಥಳೀಯ ಮುಸ್ಲಿಂ ಮುಖಂಡರ ಅಸಮಾಧಾನ, ಸ್ಥಳೀಯರನ್ನು ಕಡೆಗಣಿಸಿದ ಆರೋಪ

ರಾಯಚೂರು: ನಗರದ ಯಕ್ಲಾಸಪುರ ಪ್ರದೇಶದಲ್ಲಿ ನಿರ್ಮಿಸಲಾಗಿರುವ ನೂತನ ಈದ್ಗಾ ಮೈದಾನದ ಮರು ಉದ್ಘಾಟನೆ ಹಾಗೂ ಶಾದಿ ಮಹಲ್‌ಗೆ ಅಡಿಗಲ್ಲು ಹಾಕುವ ಕಾರ್ಯಕ್ರಮ ಶನಿವಾರ ಸಂಜೆ ನಡೆಯಲಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಅವರ ಭಾಗವಹಿಸುವಿಕೆ ರಾಜಕೀಯ ಹಾಗೂ ಸಮುದಾಯದ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೋಸ್ಟರ್ ಶುಕ್ರವಾರದ ಹಿಂದಿನ ದಿನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಶುಕ್ರವಾರ ಮಧ್ಯಾಹ್ನ ಇಬ್ಬರು ಸಚಿವರ ಪ್ರವಾಸದ ವೇಳಾಪಟ್ಟಿಯ ಮಾಹಿತಿಯೂ ಲಭ್ಯವಾಗಿದೆ. ಆದರೆ ಕಾರ್ಯಕ್ರಮದ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಅಥವಾ ಆಹ್ವಾನ ಪತ್ರಿಕೆ ಹಂಚಿಕೆಯಾಗಿಲ್ಲ. ಬಹುತೇಕ ಸ್ಥಳೀಯ ಮುಸ್ಲಿಂ ಮುಖಂಡರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಈಗಾಗಲೇ ಈದ್ಗಾ ಮೈದಾನದಲ್ಲಿ ಮೂರು ಬಾರಿ ಸಾಮೂಹಿಕ ಈದ್ ನಮಾಜ್ ನೆರವೇರಿದ್ದು, ಸರಳವಾಗಿ ಉದ್ಘಾಟನೆಯೂ ನಡೆದಿರುವಾಗ ಮತ್ತೊಮ್ಮೆ ಸಚಿವರಿಂದ ಉದ್ಘಾಟನೆ ಏಕೆ ಎಂಬ ಪ್ರಶ್ನೆ ಸ್ಥಳೀಯ ಮುಸ್ಲಿಂ ಸಮುದಾಯದ ಕೆಲವು ಮುಖಂಡರು ಹಾಗೂ ಸಾರ್ವಜನಿಕರಲ್ಲಿ ಮೂಡಿದೆ.

ಈದ್ಗಾ ಮರು ಉದ್ಘಾಟನೆ ಮತ್ತು ಶಾದಿ ಮಹಲ್ ಅಡಿಗಲ್ಲು ಕಾರ್ಯಕ್ರಮ ಆಯೋಜಿಸುವ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್.ಬೋಸರಾಜು ಮತ್ತು ಅವರ ಪುತ್ರ ರವಿ ಬೋಸರಾಜು ಅವರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ. ಆದರೆ ಸ್ಥಳೀಯ ಮುಸ್ಲಿಂ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.

ನಗರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಬ್ ಮೊಹಲ್ಲಾದಲ್ಲಿರುವ ಹಳೆಯ ಈದ್ಗಾ ಮೈದಾನವು ಈದ್-ಉಲ್-ಫಿತರ್ ಹಾಗೂ ಈದ್-ಉಲ್-ಅಝ್ಹಾ (ಬಕ್ರೀದ್) ಹಬ್ಬಗಳ ಸಾಮೂಹಿಕ ನಮಾಜ್ ನಿರ್ವಹಿಸಲು ಸಾಕಾಗುತ್ತಿರಲಿಲ್ಲ. ಹೀಗಾಗಿ ನಗರದ ಮುಸ್ಲಿಮರಿಗೆ ಮತ್ತೊಂದು ಈದ್ಗಾ ಮೈದಾನದ ಅಗತ್ಯ ಸುಮಾರು ಎರಡು ದಶಕಗಳಿಂದಲೂ ಕಂಡುಬಂದಿತ್ತು.

ಸ್ಥಳೀಯ ಮುಸ್ಲಿಮರ ಮನವಿಗಳು ಹಾಗೂ ಮಾಜಿ ಸಚಿವ ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಸೇರಿದಂತೆ ಹಲವು ರಾಜಕೀಯ ಮುಖಂಡರ ಪ್ರಯತ್ನಗಳ ಫಲವಾಗಿ, ಅಂದಿನ ಜಿಲ್ಲಾಧಿಕಾರಿ ನಿತೇಶ್ ಕುಮಾರ್ ಅವರು 2024ರ ಸೆಪ್ಟೆಂಬರ್‌ನಲ್ಲಿ ನಗರದ ಹೊರವಲಯದ ಎಕ್ಲಾಸಪುರ ರಸ್ತೆಯಲ್ಲಿರುವ ನಾಲ್ಕು ಎಕರೆ ಏಳು ಗುಂಟೆ ಸರ್ಕಾರಿ ಜಮೀನನ್ನು ಹೊಸ ಈದ್ಗಾ ಸ್ಥಾಪನೆಗಾಗಿ ಮಂಜೂರು ಮಾಡಿ ಆದೇಶ ಹೊರಡಿಸಿದ್ದರು.

ನಂತರ ಸ್ಥಳೀಯ ಮುಸ್ಲಿಮರು ಮಂಜೂರಾದ ಜಮೀನನ್ನು ಅಭಿವೃದ್ಧಿಪಡಿಸಿ ಈದ್ಗಾ ಮೈದಾನವನ್ನಾಗಿ ರೂಪಿಸಿದರು. 2025ರಲ್ಲಿ ಇದೇ ಮೈದಾನದಲ್ಲಿ ಮೊದಲ ಬಾರಿಗೆ ಈದ್ ನಮಾಝ್‌ ನೆರವೇರಿಸಲಾಯಿತು. ಇಲ್ಲಿಯವರೆಗೆ ಈ ಸ್ಥಳದಲ್ಲಿ ಒಟ್ಟು ಮೂರು ಬಾರಿ ಈದ್ ನಮಾಝ್‌ ನಿರ್ವಹಿಸಲಾಗಿದೆ.

ಈಗಾಗಲೇ ಉದ್ಘಾಟನೆಗೊಂಡು ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿರುವ ಈದ್ಗಾವನ್ನು ಮತ್ತೊಮ್ಮೆ ರಾಜ್ಯ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲು ಸಿದ್ಧತೆ ನಡೆಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರು ಹಾಗೂ ಕಲಬುರಗಿಯ ಹಝರತ್ ಸೈಯದ್ ಶಾ ಗೆಸುದರಾಜ್ ಬಂದೇನವಾಝ್‌ (ರಹ.) ದರ್ಗಾದ ಸಜ್ಜಾದಾ ನಶೀನ್ ಮೌಲಾನಾ ಅಲಿ ಹುಸೇನಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಮುಂದಾಗಿರುವುದು ಸಮುದಾಯದ ಕೆಲವು ವಲಯಗಳಲ್ಲಿ ಅಚ್ಚರಿ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.

ಈದ್ಗಾ ಮೈದಾನವು ಎರಡು ವರ್ಷಗಳ ಹಿಂದೆಯೇ ಸ್ಥಳೀಯ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿದ್ದು, ಅಂದಿನಿಂದ ಮೂರು ಬಾರಿ ಈದ್ ನಮಾಝ್‌ ಕೂಡ ನೆರವೇರಿದೆ. ಹೀಗಿರುವಾಗ ಮತ್ತೊಮ್ಮೆ ಉದ್ಘಾಟನಾ ಕಾರ್ಯಕ್ರಮದ ಅಗತ್ಯವೇನಿದೆ ಎಂದು ಸ್ಥಳೀಯ ಮುಸ್ಲಿಮರು ಪ್ರಶ್ನಿಸುತ್ತಿದ್ದಾರೆ.

ಇಂತಹ ಮಹತ್ವದ ಧಾರ್ಮಿಕ ಸಂಸ್ಥೆಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸುವ ಮೊದಲು ಸ್ಥಳೀಯ ಮುಸ್ಲಿಂ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಆದರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆಕ್ಷೇಪವೂ ಕೇಳಿಬಂದಿದೆ. ಸಮುದಾಯಕ್ಕೆ ಸಂಬಂಧಿಸಿದ ಧಾರ್ಮಿಕ ವಿಚಾರದಲ್ಲಿ ಸ್ಥಳೀಯ ಮುಖಂಡರನ್ನು ಕಡೆಗಣಿಸಲಾಗಿದೆ ಎಂಬ ಆರೋಪದಿಂದ ಟೀಕೆಗಳು ತೀವ್ರಗೊಂಡಿವೆ.

ಇದೇ ವೇಳೆ, ಈದ್ಗಾಗೆ ಮಂಜೂರಾದ ಜಮೀನಿನ ಹಸ್ತಾಂತರ ಮತ್ತು ಸ್ವಾಧೀನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆಯೇ ಎಂಬ ಪ್ರಶ್ನೆಗಳೂ ಎದ್ದಿವೆ. ಅಗತ್ಯ ದಾಖಲೆಗಳು, ಕಾನೂನುಬದ್ಧ ಕ್ರಮಗಳು ಹಾಗೂ ಇತರ ಅಧಿಕೃತ ಪ್ರಕ್ರಿಯೆಗಳು ಸಂಪೂರ್ಣಗೊಂಡಿಲ್ಲ, ಕೆಲವು ವಿಷಯಗಳು ಇನ್ನೂ ಬಾಕಿ ಉಳಿದಿವೆ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಮಾಜಿ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಮುಹಮ್ಮದ್ ಶಾ ಆಲಂ ಹಾಗೂ ಕಾಂಗ್ರೆಸ್ ಪಕ್ಷದೊಳಗೆ ರವಿ ಬೋಸರಾಜು ಅವರ ಗುಂಪಿನೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಂ ಮುಖಂಡರ ಮೌನವೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸಮುದಾಯಕ್ಕೆ ನೇರವಾಗಿ ಸಂಬಂಧಿಸಿದ ಪ್ರಮುಖ ಧಾರ್ಮಿಕ ವಿಚಾರದಲ್ಲಿ ಅವರು ಸ್ಪಷ್ಟ ನಿಲುವು ತಳೆಯಬೇಕು ಎಂಬ ಅಭಿಪ್ರಾಯವನ್ನು ಟೀಕಾಕಾರರು ವ್ಯಕ್ತಪಡಿಸಿದ್ದಾರೆ. ರಾಜಕೀಯ ವ್ಯಕ್ತಿಗಳ ಓಲೈಕೆಯ ಮನೋಭಾವದಿಂದ ಹೊರಬಂದು, ಸಮುದಾಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ರವಿ ಬೋಸರಾಜು ಹಾಗೂ ಅವರ ತಂದೆ ಎನ್.ಎಸ್.ಬೋಸರಾಜು ಅವರು ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯಗಳ ಕಲ್ಯಾಣ ಮತ್ತು ಅಭಿವೃದ್ಧಿಗೆ ಆಸಕ್ತಿ ತೋರಿಸಿರುವುದಕ್ಕಾಗಿ ಹಲವು ವಲಯಗಳಲ್ಲಿ ಮೆಚ್ಚುಗೆ ಪಡೆದಿದ್ದಾರೆ. ಆದರೆ ಈದ್ಗಾ ವಿಚಾರದಲ್ಲಿ ರವಿ ಬೋಸರಾಜು ಅವರ ಇತ್ತೀಚಿನ ನಡೆ ಮುಸ್ಲಿಂ ಸಮುದಾಯದ ಕೆಲವು ವರ್ಗಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಅವರು ಟೀಕೆಗಳನ್ನು ಎದುರಿಸುತ್ತಿದ್ದಾರೆ.

ಸೂಕ್ಷ್ಮ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಅಂತಿಮಗೊಳಿಸುವ ಮೊದಲು ಸ್ಥಳೀಯ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ ಎಂದು ಸಮುದಾಯದ ಕೆಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಸಚಿವರ ಭಾಗವಹಿಸುವಿಕೆ ಮತ್ತು ರಾಜಕೀಯ ಪ್ರೋತ್ಸಾಹ ಪಡೆಯುವ ಉದ್ದೇಶದಿಂದ ಸ್ಥಳೀಯ ಮುಸ್ಲಿಮರ ಭಾವನೆಗಳು ಹಾಗೂ ಅವರ ಪ್ರತಿನಿಧಿಗಳನ್ನು ಕಡೆಗಣಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಸಮುದಾಯದ ಅನುಕೂಲಕ್ಕಾಗಿ ಕೈಗೊಳ್ಳಲಾಗಿದೆ ಎನ್ನಲಾದ ಈ ಪ್ರಯತ್ನವೇ ಇದೀಗ ಸ್ಥಳೀಯ ಮುಸ್ಲಿಂ ಸಮುದಾಯದ ಒಂದು ವರ್ಗದಲ್ಲಿ ಅಸಮಾಧಾನ ಹಾಗೂ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Tags

RaichurEidgahMuslim Leaders
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X