Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕೃಷಿ ಇಲಾಖೆ ನೇಮಕಾತಿ,...

Raichur | ಕೃಷಿ ಇಲಾಖೆ ನೇಮಕಾತಿ, ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 July 2026 10:40 PM IST
share
Raichur | ಕೃಷಿ ಇಲಾಖೆ ನೇಮಕಾತಿ, ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ರಾಯಚೂರು : ಕೃಷಿ ಇಲಾಖೆಯಲ್ಲಿನ ಅವೈಜ್ಞಾನಿಕ ನೇಮಕಾತಿ ಕ್ರಮಗಳನ್ನು ರದ್ದುಪಡಿಸುವುದು ಹಾಗೂ ಕೃಷಿ ಶಿಕ್ಷಣದ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ, ಸುಪ್ರೀಂ ಕೋರ್ಟ್ 2025ರ ಏಪ್ರಿಲ್ 10ರ ತೀರ್ಪಿನ ಪ್ರಕಾರ ನೇಮಕಾತಿ ಪ್ರಕ್ರಿಯೆ ಆರಂಭವಾದ ಬಳಿಕ ಅರ್ಹತಾ ಮಾನದಂಡಗಳನ್ನು ಬದಲಾಯಿಸಲು ಅವಕಾಶವಿಲ್ಲ. ಆದರೂ ಕೃಷಿ ಅಧಿಕಾರಿ (ಎಒ) ಹಾಗೂ ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿಯಲ್ಲಿ ಕೊನೆಯ ಕ್ಷಣದಲ್ಲಿ ಐಸಿಎಆರ್ ಮಾನ್ಯತೆ ಇಲ್ಲದ ಖಾಸಗಿ ರೈ ಟೆಕ್ನಾಲಜಿ (Rai Technology) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೆಇಎ ಪರೀಕ್ಷೆಗೆ ಅವಕಾಶ ನೀಡಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ರಾಜ್ಯದ ಸರ್ಕಾರಿ ಕೃಷಿ ವಿಶ್ವವಿದ್ಯಾಲಯಗಳಿಗೆ ಸಂಯೋಜಿತವಾಗಿರುವ ಖಾಸಗಿ ಕೃಷಿ ಕಾಲೇಜುಗಳ ಪ್ರವೇಶಾತಿಯನ್ನು ಈ ಶೈಕ್ಷಣಿಕ ವರ್ಷದಿಂದಲೇ ಸ್ಥಗಿತಗೊಳಿಸಬೇಕು. ಕೃಷಿ ಇಲಾಖೆಯ ಎಒ ಮತ್ತು ಎಎಒ ಹುದ್ದೆಗಳಿಗೆ ಬಿ.ಇ. ಬಯೋಟೆಕ್ ಪದವೀಧರರಿಗೆ ಅವಕಾಶ ನೀಡಿರುವ ನಿರ್ಧಾರವನ್ನೂ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

‘ದೇಸಿ’ ಕೋರ್ಸ್ ಮೂಲಕ ಅರ್ಹತೆ ಇಲ್ಲದವರಿಗೆ ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟದ ಪರವಾನಗಿ ನೀಡುತ್ತಿರುವುದು ರೈತರ ಹಿತಕ್ಕೆ ವಿರುದ್ಧವಾಗಿದ್ದು, ಆ ಕೋರ್ಸ್ ಅನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ವರ್ಷ ಕೃಷಿ ಇಲಾಖೆಯಲ್ಲಿ ನೇಮಕಾತಿ ನಡೆಸಬೇಕು. ಪ್ರಸ್ತುತ ಎಒ ಹಾಗೂ ಎಎಒ ನೇಮಕಾತಿಯಲ್ಲಿ ಶೇ.2ರಷ್ಟು ಕ್ರೀಡಾ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ವಿದ್ಯಾರ್ಥಿಗಳು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಅಂಕೇಶ, ಶಿವಪ್ಪ, ಮಲ್ಲಿಕಾರ್ಜುನ, ಶ್ರೀಧರ್, ಸನತ್ ಕುಲಕರ್ಣಿ, ಕಿರಣ ಪಾಟೀಲ, ಯುವರಾಜ್‌, ಅರ್ಪಿತಾ, ನಿಶ್ಚಿತ, ನಂದಿನಿ, ನರ್ಮದಾ, ರೋಹನ್ ಎಸ್.ಕವಲಗಿ, ಸತೀಶ, ಪ್ರದೀಪ, ಭೀಮಮ್ಮ, ಭವ್ಯ, ಸುಕನ್ಯಾ, ರಾಘವೇಂದ್ರ, ಗಣೇಶ, ಉಮೇಶ, ಆಕಾಶ, ನೀಲಪ್ಪ, ಮೌನೇಶ, ಮೋನಿಕಾ, ಪ್ರಧೀಪ್, ಚೇತನ್, ಸಂಗೀತ, ಮನೋಜ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Tags

protestRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X