Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನಿವೃತ್ತ ಅಂಗನವಾಡಿ...

ರಾಯಚೂರು | ನಿವೃತ್ತ ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Oct 2025 5:45 PM IST
share
ರಾಯಚೂರು | ನಿವೃತ್ತ ಅಂಗನವಾಡಿ ಕಾರ್ಯಕರ್ತರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಮೊತ್ತ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಸಂಘದ ಪದಾಧಿಕಾರಿಗಳು ಇಂದು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು 20 ಸಾವಿರ ವಯೋವೃದ್ಧರು ಯಾವುದೇ ಆರ್ಥಿಕ ಆಸರೆ ಇಲ್ಲದೇ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ಗ್ರಾಚ್ಯು ನೀಡಬೇಕು. ಗ್ರಾಚ್ಯುಟಿ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.

2011-23 ಸಾಲಿನ ಬಳಿಕ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪೈಕಿ ಈಗಾಗಲೇ ಬಹಳಷ್ಟು ಜನ ಮೃತಪಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಂಬಳ ಹಾಗೂ ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕನಿಷ್ಠ ವೇತನಕ್ಕಿಂತ ಕಡಿಮೆ ಗೌರವ ಧನದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

1975 ಅಕ್ಟೋಬರ್ 2 ರಂದು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಶಿಶುವಿನಂತೆ ಇತ್ತು. ಈ ಯೋಜನೆ ಹೆಮ್ಮರವಾಗಿ ಬೆಳೆದು ರಾಜ್ಯದಲ್ಲಿ ಸುಮಾರು 50 ಲಕ್ಷ ಫಲಾನುಭವಿಗಳಿದ್ದಾರೆ. ಮಾತ್ರವಲ್ಲದೇ ಮಾನವ ಸಂಪನ್ಮೂಲಗಳ ಬೆಳವಣಿಗೆಯನ್ನು ಖಾತ್ರಿಪಡಿಸುವ ಯೋಜನೆಯಾಗಿ ಬೆಳೆದಿದೆ.ಇಂತಹ ಯೋಜನೆಯ ಅಭಿವೃದ್ಧಿಗೆ 150, 75 ರೂ.ಗಳಿಂದ ಹಿಡಿದು ಸಾವಿರಾರು ಜನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ದುಡಿದಿದ್ದಾರೆ. ಈ ಆದೇಶ 2011 ರಿಂದ 2023 ಮಾರ್ಚ್ ತನಕ ನಿವೃತ್ತಿಯಾದ 10,311 ಅಂಗನವಾಡಿ ಕಾರ್ಯಕರ್ತೆಯರು, 11.980 ಅಂಗನವಾಡಿ ಸಹಾಯಕಿಯರಿಗೂ ಅನ್ವಯಿಸಬೇಕು. ಹಿಂದಿನವರೆಗೂ ಅನ್ವಯಿಸಬೇಕು ಎಂಬ ಸತತ ಒತ್ತಾಯಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸುಮಾರು 183 ಕೋಟಿ ರೂ. ಅನುದಾನದ ಬಿಡುಗಡೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಆದರೆ ಹಣಕಾಸು ಇಲಾಖೆ ಈ ಅನುದಾನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ ಪದ್ಮಾ, ನರ್ಮದಾ, ಗಂಗಮ್ಮ, ಶಕುಂತಲಾ ಜಯಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X