ರಾಯಚೂರು | ಅಂಬೇಡ್ಕರ್ ಹಾಸ್ಟೆಲ್ ಗೆ ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ತಾಲೂಕಿನ ಬಿಜನಗೇರಾ ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ಪಪೂ ವಸತಿ ನಿಲಯದಲ್ಲಿ ಮೂಲಸೌಕರ್ಯ ವಿಲ್ಲದೇ ಸಮಸ್ಯೆಯಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಜು.23ರಂದು ಪ್ರತಿಭಟನೆ ನಡೆಸಿದರು.
ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಗಮನಹರಿಸುತ್ತಿಲ್ಲ. ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಈ ವೇಳೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾದ ಚನ್ನಬಸವ ಯಾಪಲಪರ್ವಿ, ಪಾಲರಾಜ ಕುರ್ಡಿ, ರವಿಕುಮಾರ್ ಸಗ್ಗೊಳ್ಳಿ, ಕುಮಾರ್ ಬಯಲ್‍ಮರ್ಚೆಡ್ ನೂರಾರು ವಿದ್ಯಾರ್ಥಿಗಳು ಇದ್ದರು.
Next Story





