Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ರಾಜ್ಯದ ಪದವಿ ವಿದ್ಯಾರ್ಥಿಗಳ...

ರಾಯಚೂರು | ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Aug 2025 7:04 PM IST
share
ರಾಯಚೂರು | ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ

ರಾಯಚೂರು: ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಅಧ್ಯಕ್ಷರಾದ ಹಯ್ಯಲಪ್ಪ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ.

ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ನಂದಗೋಪಾಲ್, ಹೇಮಂತ್, ವಿರೇಶ್, ಶಿವಕುಮಾರ್ ಹಾಗೂ ನೂರರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X