Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಬೆಳೆ ಸಮೀಕ್ಷೆದಾರರ ಹುದ್ದೆ...

Raichur | ಬೆಳೆ ಸಮೀಕ್ಷೆದಾರರ ಹುದ್ದೆ ಖಾಯಂಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Aug 2026 8:37 PM IST
share
Raichur | ಬೆಳೆ ಸಮೀಕ್ಷೆದಾರರ ಹುದ್ದೆ ಖಾಯಂಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಬೆಳೆ ಸಮೀಕ್ಷೆದಾರರಿಗೆ ಸೇವಾ ಭದ್ರತೆ, ಜೀವವಿಮೆ ಹಾಗೂ ಹುದ್ದೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಂದಾಯ ಹಾಗೂ ಕೃಷಿ ಇಲಾಖೆಗಳ ಅಧೀನದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪಿ.ಆರ್. (ಖಾಸಗಿ ನಿವಾಸಿ) ಬೆಳೆ ಸಮೀಕ್ಷೆದಾರರು ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಸೇರಿದಂತೆ ಮೂರು ಋತುಗಳಲ್ಲೂ ಸಮೀಕ್ಷೆ ನಡೆಸುತ್ತಿದ್ದಾರೆ. ಆದರೆ, ಕಾರ್ಯದ ವೇಳೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರದಿಂದ ಅಗತ್ಯ ಸೌಲಭ್ಯ ಹಾಗೂ ಭದ್ರತೆ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಈ ಹಿಂದೆ ಸರ್ವೆ ನಂಬರ್ ಆಧಾರದಲ್ಲಿ ನಡೆಯುತ್ತಿದ್ದ ಬೆಳೆ ಸಮೀಕ್ಷೆ ಇದೀಗ ಹಿಸ್ಸಾವಾರು ಮಾದರಿಯಲ್ಲಿ ನಡೆಯುತ್ತಿದ್ದು, ಪ್ರತಿ ಪ್ಲಾಟ್‌ಗೆ ಕೇವಲ 11 ರೂ. ಗೌರವಧನ ನೀಡಲಾಗುತ್ತಿದೆ. ಪ್ರಯಾಣ ಭತ್ಯೆ, ಪೆಟ್ರೋಲ್ ಭತ್ಯೆ ಸೇರಿದಂತೆ ಯಾವುದೇ ಹೆಚ್ಚುವರಿ ಸೌಲಭ್ಯ ನೀಡದೆ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು.

ಮಳೆಗಾಲದಲ್ಲಿ ಕೆಸರು, ಹಳ್ಳ-ಗುಂಡಿಗಳು ಹಾಗೂ ನೀರು ತುಂಬಿದ ಪ್ರದೇಶಗಳನ್ನು ದಾಟಿ ಜಮೀನುಗಳಿಗೆ ತೆರಳಿ ಸಮೀಕ್ಷೆ ನಡೆಸಬೇಕಿದೆ. ಭತ್ತ, ಹತ್ತಿ, ಜೋಳ, ತೊಗರಿ ಸೇರಿದಂತೆ ಎತ್ತರವಾಗಿ ಬೆಳೆದ ಬೆಳೆಗಳ ನಡುವೆ ಸಂಚರಿಸುವಾಗ ಹಾವು, ಚೇಳು ಹಾಗೂ ಇತರ ವಿಷಕಾರಿ ಜೀವಿಗಳಿಂದ ಅಪಾಯ ಎದುರಾಗುವ ಸಾಧ್ಯತೆಯಿದೆ. ಕೆಲವೆಡೆ ಕಾಡುಪ್ರಾಣಿಗಳ ಭೀತಿಯ ನಡುವೆಯೂ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಸ್ವಂತ ವಾಹನಗಳಲ್ಲಿ ಸಂಚರಿಸಿ ಸಮೀಕ್ಷೆ ನಡೆಸಿದರೂ ಪೆಟ್ರೋಲ್ ಅಥವಾ ಪ್ರಯಾಣ ಭತ್ಯೆ ನೀಡುತ್ತಿಲ್ಲ. ಮರು ಸಮೀಕ್ಷೆ ಸೇರಿದಂತೆ ಹೆಚ್ಚುವರಿ ಕೆಲಸಗಳನ್ನು ವೇತನವಿಲ್ಲದೆ ಮಾಡಿಸಿಕೊಳ್ಳಲಾಗುತ್ತಿದೆ. ಕರ್ತವ್ಯದ ವೇಳೆ ಅಪಘಾತ ಸಂಭವಿಸಿದರೆ ಚಿಕಿತ್ಸಾ ವೆಚ್ಚ, ವೈದ್ಯಕೀಯ ನೆರವು ಅಥವಾ ಪರಿಹಾರ ದೊರೆಯದ ಕಾರಣ ಸಮೀಕ್ಷೆದಾರರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಕರ್ತವ್ಯದ ವೇಳೆ ಅಪಘಾತದಿಂದ ಅಂಗವೈಕಲ್ಯ ಉಂಟಾದರೆ ಕುಟುಂಬದ ಭವಿಷ್ಯವೇ ಅತಂತ್ರವಾಗುವ ಪರಿಸ್ಥಿತಿ ಇದೆ. ಆದ್ದರಿಂದ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆದಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೇವಾ ಭದ್ರತೆ, ಜೀವವಿಮೆ ಹಾಗೂ ಹುದ್ದೆ ಖಾಯಂಗೊಳಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕುಮಾರ, ಜಿಲ್ಲಾ ಉಪಾಧ್ಯಕ್ಷ ಖಾಜಾಸನ್, ಗೌರವ ಅಧ್ಯಕ್ಷ ಸಂಗಪ್ಪ ದಾಸವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮರೇಶ ಮಸ್ಕಿ, ಆರ್.ಜಿ. ದೇವದುರ್ಗ, ನಾಗರಾಜ ಪಾಟೀಲ ಸಿರವಾರ, ತಿಮಣ್ಣ ಮರಾಠ ರಾಯಚೂರು, ರವಿ ಸಾಗರ ಮಸ್ಕಿ, ಮಂಜುನಾಥ ಸಿಂಧನೂರು, ಚಂದ್ರೇಶ ಲಿಂಗಸುಗೂರು, ಶಿವಣ್ಣ ಮಾನ್ವಿ, ಬಸಲಿಂಗಪ್ಪ ಮಸ್ಕಿ, ಅಮರೇಶ ಪಾಟೀಲ ಟಿ.ಆರ್. ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X