Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕರಿಯಪ್ಪ ತಾತಾ ಜಾತ್ರೆಗೆ...

Raichur | ಕರಿಯಪ್ಪ ತಾತಾ ಜಾತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಅಧಿಕಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Aug 2026 10:22 PM IST
share
Raichur | ಕರಿಯಪ್ಪ ತಾತಾ ಜಾತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಅಧಿಕಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಸೂಚನೆ

ರಾಯಚೂರು : ಕಲ್ಮಲಾ ಗ್ರಾಮದ ಕರಿಯಪ್ಪ ತಾತಾ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಲ್ಲಿ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಸೂಚಿಸಿದರು.

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ನಡೆದ ಕರಿಯಪ್ಪ ತಾತಾ ಜಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಇದ್ದರೂ ಪ್ರತಿವರ್ಷದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸುವ ನಿರೀಕ್ಷೆಯಿದೆ. ಭಕ್ತರ ನಂಬಿಕೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಯಾವುದೇ ಧಕ್ಕೆಯಾಗದಂತೆ ದೇವಸ್ಥಾನದ ಟ್ರಸ್ಟಿಗಳು ಮತ್ತು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಎರಡು ಮಾರ್ಗಗಳಲ್ಲಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಯ ವೇಳೆ ವಿದ್ಯುತ್ ಪೂರೈಕೆ, ಕುಡಿಯುವ ನೀರು, ಸ್ವಚ್ಛತೆ, ಆರೋಗ್ಯ ಸೇವೆ, ತುರ್ತು ವೈದ್ಯಕೀಯ ನೆರವು, ಪೊಲೀಸ್ ಭದ್ರತೆ, ಸಂಚಾರ ನಿಯಂತ್ರಣ, ವಾಹನ ನಿಲುಗಡೆ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೇವಸ್ಥಾನದಿಂದ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಸಿಸಿ ರಸ್ತೆ ಈಗಾಗಲೇ ನಿರ್ಮಾಣಗೊಂಡಿದ್ದು, ವಿದ್ಯುತ್ ದೀಪಾಲಂಕಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಅಗತ್ಯಕ್ಕೆ ತಕ್ಕಷ್ಟು ಬಸ್‌ಗಳನ್ನು ನಿಯೋಜಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್ ಮಾತನಾಡಿ, ಗ್ರಾಮ ಪಂಚಾಯಿತಿಗೆ ಲಭ್ಯವಿರುವ ಅನುದಾನದ ವ್ಯಾಪ್ತಿಯಲ್ಲಿ ಜಾತ್ರೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯ ಸಂದರ್ಭದಲ್ಲಿ ಕರಿಯಪ್ಪ ತಾತಾ ಜಾತ್ರಾ ಮಹೋತ್ಸವದ ವಾಲ್ ಪೋಸ್ಟರ್‌ನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ತಹಶೀಲ್ದಾರ ಸುರೇಶ್ ವರ್ಮಾ, ಜಾತ್ರಾ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X