Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎಕ್ಸ್‌ರೇ...

Raichur | ಎಕ್ಸ್‌ರೇ ಟೆಕ್ನಿಷಿಯನ್‌ಗಳಿಗೂ ಹೊರಗುತ್ತಿಗೆ ನೇಮಕಕ್ಕೆ ಅವಕಾಶ: ಡಾ.ರಜನಿ ಎಂ.

ರಾಜ್ಯ ಮಟ್ಟದ ಸಿಎಂಇ ‘ವಿಕಿರಣ–26’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Sept 2026 7:16 PM IST
share
Raichur | ಎಕ್ಸ್‌ರೇ ಟೆಕ್ನಿಷಿಯನ್‌ಗಳಿಗೂ ಹೊರಗುತ್ತಿಗೆ ನೇಮಕಕ್ಕೆ ಅವಕಾಶ: ಡಾ.ರಜನಿ ಎಂ.

ರಾಯಚೂರು: ಎಕ್ಸ್‌ರೇ ಟೆಕ್ನಿಷಿಯನ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅವಕಾಶವಿದ್ದು, ಸಿಬ್ಬಂದಿ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಇನ್ನು ಮುಂದೆ ಎಕ್ಸ್‌ರೇ ಟೆಕ್ನಿಷಿಯನ್‌ಗಳನ್ನೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶಕಿ ಡಾ. ರಜನಿ ಎಂ. ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ ಹಾಗೂ ರಾಯಚೂರಿನ ರಿಮ್ಸ್‌ನ ರೇಡಿಯೊ ಡಯಾಗ್ನೋಸಿಸ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಿಮ್ಸ್ ಕಾಲೇಜು ಆವರಣದ ಮುಖ್ಯ ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ ಪ್ರಥಮ ರಾಜ್ಯಮಟ್ಟದ ಸಿಎಂಇ ‘ವಿಕಿರಣ–26’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಕ್ಸ್‌ರೇ ತಂತ್ರಜ್ಞರು ಭೌತವಿಜ್ಞಾನವನ್ನು ಆಳವಾಗಿ ಅಧ್ಯಯನ ಮಾಡುವುದರಿಂದ ನಿಖರವಾದ ಎಕ್ಸ್‌ರೇ ಚಿತ್ರಗಳನ್ನು ಪಡೆಯಲು ಸಾಧ್ಯವಾಗುತ್ತಿದೆ. ಇದರಿಂದ ವೈದ್ಯರಿಗೆ ರೋಗ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ನೆರವಾಗುತ್ತಿದೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆ (ಎಐ) ಬಂದರೂ ಎಕ್ಸ್‌ರೇ ತಂತ್ರಜ್ಞರ ಕೌಶಲ ಮತ್ತು ಜ್ಞಾನವನ್ನು ಸಂಪೂರ್ಣವಾಗಿ ಬದಲಿಸಲು ಸಾಧ್ಯವಿಲ್ಲ. ಯಂತ್ರಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದಿಲ್ಲ; ಮಾನವ ಪರಿಣತಿ ಅನಿವಾರ್ಯ. ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಜವಾಬ್ದಾರಿಗಳೂ ಬದಲಾಗುತ್ತಿದ್ದು, ಅನುಭವ ಮತ್ತು ಕೌಶಲಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ ಎಂದು ತಿಳಿಸಿದರು.

ವಿಜ್ಞಾನ ಬೆಳೆಯುತ್ತಿದ್ದಂತೆ ಸವಾಲುಗಳೂ ಬದಲಾಗುತ್ತಿವೆ. ಹೀಗಾಗಿ ಬದಲಾವಣೆಗೆ ಹೊಂದಿಕೊಳ್ಳುವುದು ಅಗತ್ಯ. ಉನ್ನತ ಶಿಕ್ಷಣ ಪಡೆಯಲು ಬಯಸುವ ಎಕ್ಸ್‌ರೇ ತಂತ್ರಜ್ಞರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಜಂಟಿಯಾಗಿ ಮುಂದುವರಿದ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಇಂತಹ ಕಾರ್ಯಕ್ರಮಗಳು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಿಮ್ಸ್ ನಿರ್ದೇಶಕ ಡಾ. ರಮೇಶ್ ಬಿ.ಎಚ್. ಮಾತನಾಡಿದರು. ಬಿಎಂಸಿ ಮತ್ತು ಆರ್‌ಐ ಪ್ಯಾರಾಮೆಡಿಕಲ್ ಬೋರ್ಡ್‌ನ ವಿಶೇಷ ಅಧಿಕಾರಿ ಡಾ. ವಿಜಯಕುಮಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಂದಿತಾ ಎಂ.ಎನ್., ಕೆಎಸ್‌ಜಿಆರ್‌ಐಒ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಎಸ್. ವಾಲ್ಮೀಕಿ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಅಬ್ದುಲ್ ಅಬ್ರಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಂಘಟನಾ ಕಾರ್ಯದರ್ಶಿ ದಿವಾನ್ ಗಣೇಶ್ ಸಿಂಗ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಅಧ್ಯಕ್ಷೆ ಡಾ. ಶಿಲ್ಪಾ ದೇವಕರ್ ಸ್ವಾಗತಿಸಿದರು. ಬೀದರ್‌ನ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿ ಟಿ.ಎಂ. ಮಚ್ಚೆ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಘಟಕದ ಅಧ್ಯಕ್ಷ ರಾಮು ಹೊಳೆಪ್ಪನವರ ವಂದಿಸಿದರು.

ಸಮಾವೇಶದಲ್ಲಿ ವೈದ್ಯಕೀಯ ರೇಡಿಯಾಲಜಿ ಕ್ಷೇತ್ರದ ನೂತನ ತಂತ್ರಜ್ಞಾನಗಳು, ಇಮೇಜಿಂಗ್ ವಿಜ್ಞಾನದ ಬೆಳವಣಿಗೆಗಳು ಹಾಗೂ ಕೌಶಲ ವೃದ್ಧಿಗೆ ಸಂಬಂಧಿಸಿದಂತೆ ಪರಿಣಿತರಿಂದ ತರಬೇತಿ ಮತ್ತು ಸುದೀರ್ಘ ಚರ್ಚೆಗಳು ನಡೆದವು. ಕಾರ್ಯಕ್ರಮದ ಆರಂಭದಲ್ಲಿ ಜರ್ಮನಿಯ ಭೌತಶಾಸ್ತ್ರಜ್ಞ ವಿಲ್ಹೆಲ್ಮ್ ಕಾನ್ರಾಡ್ ರಾಂಟ್‌ಜನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X