Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಎಸ್‌ಬಿಎಚ್‌ ನಿವೃತ್ತ ನೌಕರರ...

ರಾಯಚೂರು | ಎಸ್‌ಬಿಎಚ್‌ ನಿವೃತ್ತ ನೌಕರರ ತ್ರೈಮಾಸಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ1 Nov 2025 9:33 PM IST
share
ರಾಯಚೂರು | ಎಸ್‌ಬಿಎಚ್‌ ನಿವೃತ್ತ ನೌಕರರ ತ್ರೈಮಾಸಿಕ ಸಭೆ

ರಾಯಚೂರು : ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌ ನಿವೃತ್ತ ನೌಕರರ ಸಂಘದ ತ್ರೈಮಾಸಿಕ ಸಭೆಯು ಇಂದು ಬೆಳಿಗ್ಗೆ ಇಲ್ಲಿನ ಎಸ್‌ಬಿಐ ಎಂಜಿ ರಸ್ತೆ ಶಾಖೆಯಲ್ಲಿ ನಡೆಯಿತು.

ರಾಜ್ಯೋತ್ಸವ ದಿನದಂದು ಅಯೋಜಿಸಲಾಗಿದ್ದ ಈ ಸಭೆಯು ಸಾಮೂಹಿಕ ನಾಡಗೀತೆಯೊಂದಿಗೆ ಆರಂಭಗೊಂಡು ಎಲ್ಲ ಕಾರ್ಯ ಕಲಾಪಗಳು ಕನ್ನಡದಲ್ಲೇ ನಡೆದದ್ದು ವಿಶೇಷವಾಗಿತ್ತು.

ಎಸ್ಬಿಎಚ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ವೈ.ಶಶಿಧರ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಯಾಂಕ್‌ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಕುರಿತ ಚಿಂತನೆ ಸೇರಿದಂತೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು.

ಪಿಂಚಣಿದಾರರು ಪ್ರತಿ ವರ್ಷ ನವೆಂಬರ್‌ ತಿಂಗಳಲ್ಲಿ ಸಲ್ಲಿಸಬೇಕಾದ ಜೀವನ ಪ್ರಮಾಣ ಪತ್ರ ಮತ್ತು ಆರೋಗ್ಯ ವಿಮೆಯ ಮಹತ್ವ ಕುರಿತಂತೆ ಉಪಯುಕ್ತ ಮಾಹಿತಿ ಒದಗಿಸಲಾಯಿತು. ಈ ಬಗ್ಗೆ ನಡೆದ ಸಂವಾದದಲ್ಲಿ ಹಲವಾರು ಪಿಂಚಣಿದಾರರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತೀಯ ಸ್ಟೇಟ್‌ ಬ್ಯಾಂಕ್‌ ಎಂಜಿ ರಸ್ತೆ ಶಾಖೆ ಮುಖ್ಯ ವ್ಯವಸ್ಥಾಪಕರಾದ ಆನಂದ ಬಸವರಾಜ ವಾಲಿ ಮತ್ತು ನಿವೃತ್ತ ಆಧಿಕಾರಿ ನಕ್ಕ ಹುಸೇನಪ್ಪಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

75 ವರ್ಷ ಪೂರೈಸಿದ ಮಾನ್ವಿಯ ಮಲ್ಲಿನಮಡುಗು ಮಲ್ಲಿಕಾರ್ಜುನ, ದೇವದುರ್ಗದ ಚಂದ್ರ ಮೋಹನ ದೇಸಾಯಿ, ಸಂಘದ ಕ್ರಿಯಾಶೀಲ ಸದಸ್ಯರಾದ ರಮೇಶ ಹೀರಾ, ಸುಧಾಕರರಾವ್‌ ಅವರನ್ನು ಸಭೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಹೊಸ ಪಿಂಚಣಿದಾರರಾದ ಜಿ ಬಿ ಶಾಸ್ತ್ರಿ, ಹನುಮೇಶ ಬಾಬು ಹೂಲಗೇರಿ ಅವರನ್ನು ಸಂಘಕ್ಕೆ ಬರಮಾಡಿಕೊಳ್ಳಲಾಯಿತು. ರಾಜೊಳ್ಳಿ ನಾಗಪ್ಪ, ಸಾಬಿರ್‌ ಅಹಮದ್‌, ಬಾಬು ಬಳಗಾನೂರ್‌, ಭೀಮಪ್ಪ, ಮದನಮೋಹನರಾವ್‌, ಸಿಕೆಎಂ ಆಚಾರ್ಯುಲು, ಕಲಾವತಿ ಕೋಸಗಿ, ಸಿದ್ದಯ್ಯ, ಶೇಖರ್ ಮುಂತಾದವರು ಸಭೆಯಲ್ಲಿ ಮಾತನಾಡಿ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಸಂಘದ ಕಾರ್ಯದರ್ಶಿ‌ ಕಂದೂರು ಶ್ರೀನಿವಾಸ ಅವರು ವರದಿ ವಾಚನ ಮಾಡಿದರು. ಖಜಾಂಚಿ ಪತಂಗೆ ಹನುಮಂತರಾವ್‌ ಲೆಕ್ಕ ಪತ್ರ ಒಪ್ಪಿಸಿದರು. ರಮೇಶ ಹೀರಾ ಅವರು ಪ್ರಾರ್ಥನೆಗೈದರು. ಭೀಷ್ಮಾಚಾರ್‌ ವಂದನೆ ಸಲ್ಲಿಸಿದರು. ಶ್ರೀನಿವಾಸ ಗಟ್ಟು ಕಾರ್ಯಕ್ರಮ ನಿರೂಪಣೆ ಮಾಡಿದರು.

ಈ ಸಂದರ್ಭದಲ್ಲಿ ಅಪೋಲೋ ಫಾರ್ಮಸಿ ವತಿಯಿಂದ ಪಿಂಚಣಿದಾರರ ಉಚಿತ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ಕಳೆದ ಅವಧಿಯಲ್ಲಿ ನಿಧನರಾದ ಪಿಂಚಣಿದಾರರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X