Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಸಾಹಿತಿ ಬರಗೂರು ರಾಮಚಂದ್ರಪ್ಪ...

ರಾಯಚೂರು| ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ "ಸೌಹಾರ್ದ ಭಾರತ' ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 Jan 2026 5:44 PM IST
share
ರಾಯಚೂರು| ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸೌಹಾರ್ದ ಭಾರತ ಕೃತಿ ಲೋಕಾರ್ಪಣೆ

ರಾಯಚೂರು: ಮಹಿಳೆಯರು ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಎಲ್ಲರೂ ಕೂಡಿ ಸೌಹಾರ್ದ ಭಾರತವನ್ನು ಕಟ್ಟಬೇಕಾಗಿದೆ ಎಂದು ರಾಯಚೂರಿನ ಹಿರಿಯ ಸಾಹಿತಿ ವೀರ ಹನುಮಾನವರು ಹೇಳಿದರು.

ಶನಿವಾರದಂದು ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಹಾಗೂ ಮ್ಯಾದಾರ್ ಲಲಿತಕಲಾ ಪ್ರತಿಷ್ಠಾನ ರಾಯಚೂರು ಇವರ ಸಹಯೋಗದಲ್ಲಿ ರಾಯಚೂರು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡ ನಾಡಿನ ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರ "ಸೌಹಾರ್ದ ಭಾರತ, ಸಮಾನತೆಯ ಸ್ನೇಹಿತ" ಪುಸ್ತಕ ಜನಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿನ ಸಾಮಾಜಿಕ ನ್ಯಾಯದ ಅನೇಕ ಮುಖಗಳನ್ನು ಕಾಣಬಹುದು.10 ಲೇಖನಗಳಲ್ಲಿ ಭಾರತ ಪಾರಂಪರಿಕ ಸೌಹಾರ್ದತೆ ಜೊತೆಗೆ ದೇಶದ ಬಿಕ್ಕಟ್ಟುಗಳಿಗೆ ಪರಿಹಾರವನ್ನು ಕಾಣಬಹುದಾಗಿದೆ ಎಂದು ಹೇಳಿದರು.

ಡಾ. ಸಿ. ಬಿ. ಚಿಲ್ಕರಾಗಿ ಸದಸ್ಯರು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಅವರು ಪುಸ್ತಕ ಲೋಕಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಮಾರುಕಟ್ಟೆ ಮಾತುಗಳಿಗಿಂತ ಮೌಲ್ಯ ಮಾತುಗಳು ಉತ್ತಮ ಎಂದು ಹೇಳಿದರು.

ಕೃತಿ ಪರಿಚಯವನ್ನು ಮಾಡಿ ಹಿರಿಯ ಸಾಹಿತಿಗಳು, ಮಾಜಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹಾಂತೇಶ ಮಸ್ಕಿ ಅವರು ಮಾತನಾಡುತ್ತಾ, ಈ ರಾಷ್ಟ್ರವನ್ನು ಒಂದೇ ಧರ್ಮಕ್ಕೆ ಸೀಮೀತಗೊಳಿಸಬಾರದು ಎನ್ನುವುದು ಈ ಪುಸ್ತಕದಲ್ಲಿರುವ ತಿರುಳಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅತುಬಿಹಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಖಾದರ್ ಬಾಷಾ ಮಾತನಾಡಿ, ಬರಗೂರವರು ಭಾರತ ಚಿಂತನೆಯನ್ನು ಬೆವರಿನ ಸಂಸ್ಕೃತಿ ಮೂಲಕ ಕಟ್ಟಿದರು ಎಂದು ಹೇಳಿದರು.

ಕ್ರಿ ಶ 960 ರಿಂದ ನಾವು ಪಂಪನ ಸಾಹಿತ್ಯ ಓದುತ್ತೇವೆ, ಆದರೇ ವಿಚಾರವಂತರ ನಾಡಿನಲ್ಲಿ ವಿಚಾರವಂತರ ಕೊಲೆಗಾಳಾಗುವುದೇಕೆ? ವರ್ತಮಾನದಲ್ಲಿ ಈ ಪುಸ್ತಕದ ಆಶಯಗಳು ಪ್ರಸ್ತುತ. ಹಿಂದೆ ಇರುವ ಸೌಹಾರ್ದತೆ ಇಂದು ಯಾಕೆ ಇಲ್ಲ, ಮೊದಲು ನಾವು ಮಾನವರು ಪರಿವರ್ತನೆ ಆಗಬೇಕು. ನಮ್ಮ ತಪ್ಪನ್ನು ನಾವು ತಿದ್ದಿಕೊಂಡು ನಡೆಯಬೇಕು ಎಂದರು. ಜಾತಿ ಧರ್ಮ ಮನೆಯ ಒಳಗೆ ಇರಲಿ ಹೊರಗೆ ನಾವೆಲ್ಲರೂ ಒಂದೇ ಅನ್ನುವ ಭಾವ ಬರಲಿ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ಸಾಹಿತಿಗಳಾದ ಬಾಬು ಬಂಡಾರಿಗಲ್, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಯಿತು. ಇನ್ನೂ ನಮಗೆ ಸೌಹಾರ್ದ ಭಾರತ ಬೆಳೆಸಲು ಆಗುತ್ತಿಲ್ಲ. ಸೌಹಾರ್ದತೆ ಮತ್ತು ಸಮಾನತೆಯ ಅಗತ್ಯ ಇನ್ನೂ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ದೇಶದ ಸಮಗ್ರ ಜನತೆಗಾಗಿ ಹೋರಾಟ ಮಾಡಿದವರು ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಂಗಣ್ಣ ಪಾಟೀಲ್ ಅಳ್ಳುಂಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ವೇದಿಕೆಯಲ್ಲಿ ನಿಕಟ ಪೂರ್ವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಬಸವ ಪ್ರಭು ಪಾಟೀಲ್ ಬೆಟ್ಟದೂರು, ಮ್ಯಾದಾರ್ ಲಲಿತಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಚ್.ಎಚ್. ಮ್ಯಾದಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಬಿ.ವಿಜಯ ರಾಜೇಂದ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಮ್ಯಾದಾರ್ ಲಲಿತಕಲಾ ಪ್ರತಿಷ್ಠಾನ ರಾಯಚೂರು ಇದರ ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ರಾಯಚೂರಿನ ನಾಗರಿಕರು ಭಾಗವಹಿಸಿದ್ದರು.

ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿಗಳಾದ ರಾವುತರಾವ್ ಬರೂರ ಸ್ವಾಗತಿಸಿದರು. ರಾಮಣ್ಣ ಮ್ಯಾದಾರ್ ವಂದಿಸಿದರು. ಡಾ.ರೇಖಾ ಪಾಟೀಲ್ ನಿರೂಪಿಸಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X