Raichur | ಪಡಿತರ ಚೀಟಿದಾರರು ಆಗಸ್ಟ್‌ನಲ್ಲೇ ಇ-ಕೆವೈಸಿ ಮಾಡಲು ಸೂಚನೆ

ರಾಯಚೂರು: ದೇವದುರ್ಗ ತಾಲ್ಲೂಕಿನ ಪಡಿತರ ಚೀಟಿದಾರರು ಆಗಸ್ಟ್ 2026ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚಿಸಿದೆ.
ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿಯ ಸದಸ್ಯರು ಹಾಗೂ 5 ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲದ ಹಿಂದೆ ಇ-ಕೆವೈಸಿ ಮಾಡಿಸಿರುವ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ದೇವದುರ್ಗ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಹಣ ಪಾವತಿಸಬೇಕಾಗಿಲ್ಲ. ಯಾವುದೇ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ಪಡೆದರೆ, ದೇವದುರ್ಗ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸುವಂತೆ ಸೂಚಿಸಲಾಗಿದೆ.
ಇ-ಕೆವೈಸಿ ಮಾಡಿಸದೆ ಇರುವ ಫಲಾನುಭವಿಗಳ ಹೆಸರನ್ನು ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಿಂದ ತೆಗೆದುಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
Next Story




