Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಾ.6 ರಿಂದ ನವೋದಯ ಶಿಕ್ಷಣ...

ರಾಯಚೂರು | ಮಾ.6 ರಿಂದ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ರೀಗಲ್-25 ವಾರ್ಷಿಕೋತ್ಸವ

ಪದವಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ, ಸಾಂಸ್ಕೃತಿಯ ಕಾರ್ಯಕ್ರಮ : ಎಸ್.ಆರ್.ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ5 March 2025 4:23 PM IST
share
ರಾಯಚೂರು | ಮಾ.6 ರಿಂದ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ರೀಗಲ್-25 ವಾರ್ಷಿಕೋತ್ಸವ

ರಾಯಚೂರು : ನವೋದಯ ಶಿಕ್ಷಣ ಸಂಸ್ಥೆ‌‌ಯ ವತಿಯಿಂದ ಮಾ.6 ರಿಂದ ಮೂರು ದಿನಗಳ ಕಾಲ ರೀಗಲ್- 25 ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಇಲ್ಲಿನ ನವೋದಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನವೋದಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್.ಆರ್.ರೆಡ್ಡಿ ಹೇಳಿದರು.

ಅಂದು ಸಂಜೆ 6:30 ಕ್ಕೆ ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ ಡಾ.ವೈ.ಸಿ ಯೋಗಾನಂದ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾ.7 ರಂದು ಬೆಳಿಗ್ಗೆ 10.00 ಗಂಟೆಗೆ ವೈದ್ಯಕೀಯ, ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಮುಂಬೈನ ಲೀಲಾವತಿ ಖೇರ್ ಹಿಂದುಜಾ ಹಾಲಿ ಫ್ಯಾಮಿಲಿ ಮತ್ತು ಬ್ರಾಂಚ್ ಕ್ಯಾಂಡಿ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ.ಆನಂದ ಎಂ.ರಾವ್., ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಾ.8 ರಂದು ಬೆಳಿಗ್ಗೆ 10:45 ಕ್ಕೆ ನವೋದಯ ಸಭಾಂಗಣದಲ್ಲಿ ಫಿಸಿಯೋಥೆರಪಿ, ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಶಿಕ್ಷಣ ಪದವೀಧರರಿಗೆ ಭಾರತೀಯ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಡಾ.ಟಿ.ದಿಲೀಪ್ ಕುಮಾರ ಪದವಿ ಪ್ರದಾನ ಮಾಡಲಿದ್ದಾರೆ.

ಸಂಜೆ 6:30 ಗಂಟೆಗೆ ಯೂಫೋರಿಯಾ - ಸಾಂಸ್ಕೃತಿಕ ಉತ್ಸವ ನಡೆಯಲಿದೆ. ರಾಯಚೂರು ಜಿಪಂ ಸಿಇಒ ರಾಹುಲ್ ಪಾಂಡ್ವೆ ಉದ್ಘಾಟಿಸುವರು. ಒಟ್ಟು 320 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದರು.

ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಅನುಮೋದನೆ :

ಪ್ರಥಮ ಬಾರಿಗೆ ನವೋದಯ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತೆ ಸಂಸ್ಥೆ ಎಂದು ಅನುಮೋದನೆ ದೊರೆತಿದೆ. ನವೋಯದ ಆಸ್ಪತ್ರೆಯಲ್ಲಿ 12 ತುರ್ತು ನಿಗಾ ಘಟಕಗಳನ್ನು 3.5 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಗಿದೆ. ಎನ್‌ ಬಿಎಚ್ ಸ್ಟಾಂಡರ್ಡನಲ್ಲಿ ನಿರ್ಮಿಸಲಾಗಿದೆ. ಸ್ಪೋಟ ಆಕಾಡೆಮಿ ನಿರ್ಮಾಣ ಕಾರ್ಯಪ್ರಗತಿಯಲ್ಲಿದ್ದು ಜೂನ್ ಅಂತ್ಯಕ್ಕೆ ಪ್ರಾರಂಭವಾಗಲಿದೆ. ನವೋದಯದ ಸಂಸ್ಥೆಯಿಂದಲೇ ಶಿಕ್ಷಣ ಮತ್ತು ಆರೋಗ್ಯ ವಿಷಯಗಳ ಕುರಿತು 10 ಕಿಮಿ ವ್ಯಾಪ್ತಿಯಲ್ಲಿ ವಿಷಯಗಳನ್ನು ಪ್ರಚಾರಪಡಿಸಲು ನವೋದಯ ಎಫ್‌ಎಫ್ ರೇಡಿಯೋ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯಲಾಗಿದೆ ಎಂದು ಹೇಳಿದರು.

ಎಸ್.ಆರ್.ರೆಡ್ಡಿ ಫೌಂಡೇಷನ್‌ನಿಂದ 20 ಬಿಎಸ್‌ಸಿ ಮತ್ತು 20 ಜಿಎನ್ಎಂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಿಗೆ ವಿದ್ಯಾರ್ಥಿ ವೇತನ, ಉಚಿತ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ವರ್ಷದಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ ನೀಡಲು ಅಲೊಚಿಸಲಾಗಿದೆ. 6,656 ವಿದ್ಯಾರ್ಥಿಗಳು ಸಂಸ್ಥೆಯ ವಿವಿಧ ಕೋರ್ಸ್‌ಗಳ ಶಿಕ್ಷಣ ಪಡೆಯುತ್ತಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಿಸ್ಕೋ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು 3 ಕೋಟಿ ರೂ. ವೆಚ್ಚದಲ್ಲಿ ಆರ್ಟಿಫಿಶಲ್ ಎಂಟಿಲೆಜೆನ್ಸ್ ತಂತ್ರಾದಡಿ ಶಿಕ್ಷಣ ನೀಡಲು ಸೆಂಟರ್ ಫಾರ್ ಎಕ್ಸಲೆನ್ಸಿ ಕೇಂದ್ರ ಸ್ಥಾಪಿಸಲಾಗುವುದು. ಇದಕ್ಕೆ 3 ಕೋಟಿ ರೂ. ವೆಚ್ಚವಾಗಲಿದೆ. ನವೋದಯ ಶಿಕ್ಷಣ ಸಂಸ್ಥೆಯ ಎಲ್ಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಆದ್ಯತೆ ನೀಡಿದ್ದು, ಅನೇಕರು ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಅನೇಕರು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ತಾಲೂಕಿನ ಕಲ್ಮಲಾ, ಬಿಜನಗೇರ, ಇಡಪನೂರು, ಚಂದ್ರಬಂಡಾ‌ ಸೇರಿದಂತೆ ಸುತ್ತ ಮುತ್ತಲಿನ‌ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇಂದಿಗೂ ಅನೇಕ ಹಳ್ಳಿಗಳಲ್ಲಿ ಗರ್ಭಿಣಿಯರು ಮನೆಗಳಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುತ್ತಿದ್ದು‌, ತಾಯಿ-ಶಿಶುಮರಣ ತಡೆಗಟ್ಟಲು ನವೋದಯ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡವರಿಗೆ ತಾಯಿ ಮಡಿಲು ಕಿಟ್ ನೀಡುತ್ತಿದ್ದೇವೆ‌ ಹಾಗೂ 3 ಸಾವಿರ ರೂ. ಸಹಾಯಧನ ನೀಡುತ್ತಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ.ಶ್ರೀನಿವಾಸ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X