Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ...

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಸೌಹಾರ್ದ ಕ್ರಿಕೆಟ್ ಟೂರ್ನಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Sept 2026 7:25 PM IST
share
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಸೌಹಾರ್ದ ಕ್ರಿಕೆಟ್ ಟೂರ್ನಿಗೆ ಚಾಲನೆ

ರಾಯಚೂರು : ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆ ಅಧಿಕಾರಿಗಳ ಸೌಹಾರ್ದ ಕ್ರಿಕೆಟ್ ಟೂರ್ನಮೆಂಟ್‌ಗೆ ಜಿಲ್ಲಾಧಿಕಾರಿ ಪೂವಿತಾ ಎಸ್ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಿಪೋರ್ಟರ್ಸ್ ಗಿಲ್ಡ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಪೂವಿತಾ ಎಸ್, ಅಧಿಕಾರಿಗಳ ನಡುವೆ ಇಂತಹ ಕ್ರೀಡಾಸ್ಫೂರ್ತಿಯ ವಾತಾವರಣ ನಿರ್ಮಾಣವಾಗಬೇಕು. ಕ್ರೀಡಾಕೂಟಗಳು ಪರಸ್ಪರ ಸೌಹಾರ್ದತೆ ಮತ್ತು ಮಾಹಿತಿ ವಿನಿಮಯಕ್ಕೆ ವೇದಿಕೆಯಾಗುತ್ತವೆ ಎಂದು ಹೇಳಿದರು.

ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯಕರ ಮನೋಭಾವ ಬೆಳೆಯುವುದರ ಜೊತೆಗೆ ದೈಹಿಕ ಕ್ಷಮತೆ ಮತ್ತು ಫಿಟ್ನೆಸ್‌ಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ವೆಂಕಟ ಸಿಂಗ್ ಮಾತನಾಡಿ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಕಳೆದ 25 ವರ್ಷಗಳಿಂದ ಪತ್ರಕರ್ತರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಬೆಳ್ಳಿ ಮಹೋತ್ಸವದ ಅಂಗವಾಗಿ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಪತ್ರಕರ್ತರ ಸಂಘಟನೆಗಳಿಗೆ ನಗರಸಭೆ ನೀಡಿದ ಜಾಗದಲ್ಲಿ ಕಟ್ಟಡ ನಿರ್ಮಾಣವಾಗಿದ್ದು, ರಿಪೋರ್ಟರ್ಸ್ ಗಿಲ್ಡ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲೆಯ ಪ್ರಮುಖ ಪತ್ರಕರ್ತರ ಸಂಘಟನೆಗಳಾಗಿ ಕಾರ್ಯನಿರ್ವಹಿಸುತ್ತಿವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಹಕಾರದಿಂದ ಇಂತಹ ಸೌಹಾರ್ದಯುತ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿವೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿ ಅಧಿಕಾರಿಗಳು ಮತ್ತು ಪತ್ರಕರ್ತರನ್ನು ಒಂದೇ ವೇದಿಕೆಯಲ್ಲಿ ಸೇರಿಸಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ ಮಾತನಾಡಿ, ಇಂತಹ ಕ್ರೀಡಾಕೂಟಗಳು ಒತ್ತಡ ನಿವಾರಣೆಗೆ ಸಹಕಾರಿಯಾಗುತ್ತವೆ. ಪತ್ರಕರ್ತರು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಮಾತನಾಡಿ, ಆಡಳಿತ ಮತ್ತು ಮಾಧ್ಯಮಗಳ ನಡುವೆ ಉತ್ತಮ ಸಮನ್ವಯ ಇದ್ದರೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲವಾಗುತ್ತದೆ. ಆಟವನ್ನು ಕ್ರೀಡಾಸ್ಫೂರ್ತಿಯಿಂದ ಆಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ್ ಮಾತನಾಡಿ, ರಿಪೋರ್ಟರ್ಸ್ ಗಿಲ್ಡ್ 25 ವರ್ಷಗಳಿಂದ ಹಲವು ಚಟುವಟಿಕೆಗಳನ್ನು ನಡೆಸುತ್ತಿದ್ದು, ಸುದ್ದಿಯ ಒತ್ತಡದ ನಡುವೆಯೂ ಪತ್ರಕರ್ತರು ಕ್ರೀಡೆಯಲ್ಲಿ ಭಾಗವಹಿಸುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಮಾತನಾಡಿ, ಬೆಳ್ಳಿ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಕಥೆ-ಕವನ ಸ್ಪರ್ಧೆ, ಜಿಲ್ಲೆಯ ಹೋರಾಟಗಳ ಕುರಿತ ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಸೌಹಾರ್ದ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಕುಕನೂರು, ನಿಕಟಪೂರ್ವ ಅಧ್ಯಕ್ಷ ಚೆನ್ನಬಸವಣ್ಣ, ರಿಪೋರ್ಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹಿರಿಯ-ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X