Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪೌರಕಾರ್ಮಿಕರನ್ನು...

ರಾಯಚೂರು | ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ8 Jun 2026 5:49 PM IST
share
ರಾಯಚೂರು | ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ

ರಾಯಚೂರು, ಜೂ.7: ರಾಯಚೂರು ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸೇವಾ ಭದ್ರತೆ, ಖಾಯಂಗೊಳಿಸಬೇಕು ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಸಮಾಜ ಸೇವಕ ಸಣ್ಣ ಬಾಬು ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲ‌ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಯಚೂರು ನಗರಸಭೆ ಮಹಾನಗರ ಪಾಲಿಕೆಯಾಗಿದ್ದರೂ ಪೌರಕಾರ್ಮಿಕರ ಕೊರತೆ ತೀವ್ರವಾಗಿದ್ದು, ಪ್ರಸ್ತುತ ಸುಮಾರು 370 ಕಾರ್ಮಿಕರು ಮಾತ್ರ ಇದ್ದಾರೆ. ಇವರಲ್ಲಿ ಹಲವರು 15 ರಿಂದ 20 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದರೂ ಇನ್ನೂ ಖಾಯಂ ನೇಮಕಾತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಸ್ವಚ್ಛತೆ, ನೀರು ಸರಬರಾಜು, ಒಳಚರಂಡಿ ನಿರ್ವಹಣೆ ಸೇರಿದಂತೆ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಮುಖ ಕಾರ್ಯಗಳನ್ನು ಪೌರಕಾರ್ಮಿಕರು ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ. ಒಂದು ಅಥವಾ ಎರಡು ದಿನಗಳ ಕಾಲ ಅವರ ಸೇವೆ ಸ್ಥಗಿತಗೊಂಡರೂ ನಗರ ಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದ್ದರೂ, ಅವರ ಸೇವೆಗೆ ತಕ್ಕ ಮಾನ್ಯತೆ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕೆಲಸ ನಿರ್ವಹಣೆಗೆ ಅಗತ್ಯವಾದ ಸುರಕ್ಷತಾ ಉಪಕರಣಗಳು, ರಕ್ಷಣಾ ಸಾಮಗ್ರಿಗಳು ಹಾಗೂ ಮೂಲ ಸೌಲಭ್ಯಗಳ ಕೊರತೆ ನಡುವೆಯೂ ಪೌರಕಾರ್ಮಿಕರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಸೇವಾ ಭದ್ರತೆ, ವಸತಿ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಣ್ಣ ಬಾಬು ಆರೋಪಿಸಿದ್ದಾರೆ. ಪೌರಕಾರ್ಮಿಕರ ಸೇವೆಯನ್ನು ಗೌರವಿಸಿ ಅವರ ಬದುಕಿಗೆ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags

RaichurUnion MinisterNirmala Sitharaman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X