ರಾಯಚೂರು | ರಸ್ತೆ ಅಪಘಾತ : ಬೈಕ್ ಸವಾರ ಮೃತ್ಯು

ಸಾಂದರ್ಭಿಕ ಚಿತ್ರ
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಸೀಕಲ್ ಕ್ರಾಸ್ ಬಳಿ ಬೈಕ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತನನ್ನು ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದ ಲಕ್ಷ್ಮಣ (28) ಎಂದು ಗುರುತಿಸಲಾಗಿದೆ.
ಮೃತ ಯುವಕ ತನ್ನ ಗ್ರಾಮದಿಂದ ಮಾನ್ವಿ ಕಡೆಗೆ ವೇಗವಾಗಿ ಹೋಗುವಾಗ ಓವರ್ ಟೇಕ್ ಮಾಡಲು ಮುಂದಾಗಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮಾನ್ವಿ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ವಾಹನಗಳನ್ನು ಜಪ್ತಿ ಮಾಡಿ ಮೃತದೇಹವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
Next Story





