ರಾಯಚೂರು | ಭಾರೀ ಮಳೆಗೆ ಕೊಚ್ಚಿಹೋದ ಜಾಗೀರ್ ವೆಂಕಟಾಪೂರ ಹಳ್ಳದ ರಸ್ತೆ

ರಾಯಚೂರು : ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ತಾಲೂಕಿನ ಜಾಗೀರ್ ವೆಂಕಟಾಪುರ ಸಮೀಪದಲ್ಲಿರುವ ಹಳ್ಳದ ತಾತ್ಕಾಲಿಕ ರಸ್ತೆಯು ಕೊಚ್ಚಿಹೋಗಿದ್ದು ಇದರಿಂದಾಗಿ ಗ್ರಾಮದ ಸಂಪರ್ಕ ಕಡಿತಗೊಂಡಿರುವ ಬಗ್ಗೆವರದಿಯಾಗಿದೆ.
ಕಳೆದ ಹಲವು ತಿಂಗಳಿನಿಂದ ಗ್ರಾಮದ ಸಮೀಪದಲ್ಲಿರುವ ಹಳ್ಳದ ಸೇತುವೆ ಕಾಮಗಾರಿ ಕೈಗೊಳ್ಳಲಾಗಿತ್ತು. ಇದರಿಂದಾಗಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಭಾರೀ ಮಳೆಯಾಗಿದ್ದರಿಂದ ಹಳ್ಳ ತುಂಬಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ಘಟನೆಯಿಂದಾಗಿ ಎರಡೂ ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು, ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ.
ಮಳೆಗಾಲ ಆರಂಭದ ಪೂರ್ವದಲ್ಲಿಯೇ ಹಳ್ಳದ ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಕೆಲಸವನ್ನು ನಿಧಾನಗತಿಯಲ್ಲಿ ನಡೆಸಿದ್ದರಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story





