Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸರ್ಕಾರಿ ಬಾಲಕರ ಪಿಯು...

Raichur | ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ

ವಾರ್ತಾಭಾರತಿವಾರ್ತಾಭಾರತಿ6 Aug 2026 7:13 PM IST
share
Raichur | ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ
ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ರಾಯಚೂರು: ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 10 ಗಂಟೆಗೆ ಮೇಲ್ಚಾವಣಿಯ ಪದರ ಉದುರಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಕಾಲೇಜಿನ ವಾಣಿಜ್ಯ ವಿಭಾಗದ ತರಗತಿಯಲ್ಲಿ ಈ ಘಟನೆ ನಡೆದಿದೆ. ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮೇಲ್ಚಾವಣಿಯ ಪದರ ಏಕಾಏಕಿ ಉದುರಿ ಬಿದ್ದಿದ್ದು, ವಿದ್ಯಾರ್ಥಿಗಳು ತಕ್ಷಣ ತರಗತಿಯಿಂದ ಹೊರಗೆ ಓಡಿ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ.

ಸುಮಾರು 30 ವರ್ಷಗಳ ಹಿಂದೆ ಹೈದರಾಬಾದ್–ಕರ್ನಾಟಕ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಕಾಲೇಜಿನ ಕಟ್ಟಡ ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಕಾಲೇಜು ಆಡಳಿತವು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಅನುಮೋದನೆ ದೊರೆತಿಲ್ಲ ಎಂದು ಆರೋಪಿಸಲಾಗಿದೆ.

ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು, ಎಐಡಿಎಸ್ಒ ಸಂಘಟನೆಯ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿನಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಧರಣಿ ನಡೆಸಿದ ವಿದ್ಯಾರ್ಥಿಗಳು, ಹೊಸ ಕಟ್ಟಡ ನಿರ್ಮಾಣ ಹಾಗೂ ಶಿಥಿಲಗೊಂಡಿರುವ ಕೊಠಡಿಗಳ ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ್ ಮಾತನಾಡಿ, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಕಾಲೇಜಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಜೀವ ಅಪಾಯದಲ್ಲಿದೆ. ಕೂಡಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಘಟನೆಯ ಮಾಹಿತಿ ತಿಳಿದು ತಹಶೀಲ್ದಾರ್ ಸುರೇಶ ವರ್ಮಾ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಥಿಲಗೊಂಡಿರುವ ಕಟ್ಟಡಗಳ ಕುರಿತು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ತಹಶೀಲ್ದಾರ್ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿದ್ಯಾರ್ಥಿಗಳ ಮನವಿ ಆಲಿಸಿ, ಶಿಥಿಲಗೊಂಡಿರುವ ಕೊಠಡಿಗಳ ತುರ್ತು ದುರಸ್ತಿ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ್, ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ, ಮಲ್ಲಣಗೌಡ, ವಿದ್ಯಾರ್ಥಿಗಳಾದ ಶ್ರೀಕಾಂತ, ರವಿ, ಮಲ್ಲಿಕಾರ್ಜುನ, ಮೊಹಮ್ಮದ್ ಅಖ್ತರ್, ಇಮ್ತಿಯಾಜ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.




Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X