Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಗುರಿ ನಿಗದಿಪಡಿಸಿ ನಿರಂತರ...

Raichur | ಗುರಿ ನಿಗದಿಪಡಿಸಿ ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ: ಡಾ.ನಾಗಲಕ್ಷ್ಮಿ ಚೌಧರಿ

ವಾರ್ತಾಭಾರತಿವಾರ್ತಾಭಾರತಿ10 July 2026 7:48 PM IST
share
Raichur | ಗುರಿ ನಿಗದಿಪಡಿಸಿ ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ: ಡಾ.ನಾಗಲಕ್ಷ್ಮಿ ಚೌಧರಿ
ವಿದ್ಯಾರ್ಥಿನಿಯರೊಂದಿಗೆ ಮಹಿಳಾ ಆಯೋಗದ ಅಧ್ಯಕ್ಷೆಯ ಸಂವಾದ

ರಾಯಚೂರು : ಉತ್ತಮ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ, ಅದನ್ನು ಸಾಧಿಸಲು ನಿರಂತರ ಪರಿಶ್ರಮ ಪಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು. ಸೋಲು ಎದುರಾದರೂ ಕಲಿಕೆಯನ್ನು ಎಂದಿಗೂ ಬಿಡಬಾರದು. ಪ್ರತಿದಿನ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡು, ಸಮಕಾಲೀನ ವಿದ್ಯಮಾನಗಳ ಬಗ್ಗೆ ಅರಿವು ಹೊಂದಬೇಕು. ಜ್ಞಾನವೇ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಸ್ತ್ರೀ ಶೋಷಣೆಯ ವಿರುದ್ಧ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಸ್ನೇಹ ಬಳಗವನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಮೊಬೈಲ್ ಮತ್ತು ಇಂಟರ್‌ನೆಟ್‌ನ್ನು ಜವಾಬ್ದಾರಿಯಿಂದ ಬಳಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಸ್ನೇಹ ಬೆಳೆಸುವುದನ್ನು ತಪ್ಪಿಸಬೇಕು. ಮಹಿಳೆಯರ ಮೇಲೆ ಬ್ಲ್ಯಾಕ್‌ಮೇಲ್ ಅಥವಾ ಕಿರುಕುಳ ನಡೆದರೆ ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಬೇಕು. ಮಹಿಳೆಯರಿಗಾಗಿ ವಿಶೇಷ ಮಹಿಳಾ ಪೊಲೀಸ್ ಠಾಣೆಗಳಿದ್ದು, ಅವುಗಳ ನೆರವು ಪಡೆಯಬೇಕು ಎಂದು ತಿಳಿಸಿದರು.

ವಿದ್ಯಾರ್ಥಿನಿಯರು ಧೈರ್ಯದಿಂದ ಮಾತನಾಡಬೇಕು. ಯಾವುದೇ ಸಮಸ್ಯೆ ಎದುರಾದರೂ ಪಾಲಕರಿಗೆ ತಿಳಿಸಿ, ಅಗತ್ಯವಿದ್ದರೆ ಪೊಲೀಸರ ಸಹಾಯ ಪಡೆಯಬೇಕು. ಸರ್ಕಾರದ ಸಹಾಯವಾಣಿ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂವಾದದಲ್ಲಿ ವಿದ್ಯಾರ್ಥಿನಿಯರು ತಮ್ಮ ಊರಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ಕಾಲೇಜಿಗೆ ನಡೆದುಕೊಂಡು ಬರಬೇಕಾಗುತ್ತಿದೆ ಎಂದು ಸಮಸ್ಯೆ ವಿವರಿಸಿದರು. ಇದಕ್ಕೆ ಸ್ಪಂದಿಸಿದ ಡಾ. ನಾಗಲಕ್ಷ್ಮಿ ಚೌಧರಿ ಅವರು ವಿದ್ಯಾರ್ಥಿನಿಯರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆತ್ಮೀಯವಾಗಿ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ವೇದಿಕೆಯಿಂದಲೇ ಸೆಲ್ಫಿ ತೆಗೆದುಕೊಂಡ ಅವರು, ವಿದ್ಯಾರ್ಥಿನಿಯರೂ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶರಣಮ್ಮ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಯಂಕಣ್ಣ, ಪರಿಸರ ಪ್ರೇಮಿ ಈರಣ್ಣ ಕೋಸಗಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಸಂತೋಷ ಕುಮಾರ್ ಹಾಗೂ ಮಹದೇವಪ್ಪ, ಇಲಾಖೆಯ ನಿರೂಪಣಾಧಿಕಾರಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಿರಿಜವ್ವ ಜಂಡರ್ ನಿರೂಪಿಸಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X