ರಾಯಚೂರು | ಸಿರವಾರ ಶಿಶು ಅಭಿವೃದ್ದಿ ಯೋಜನೆ : ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ

ರಾಯಚೂರು : ಜಿಲ್ಲೆಯ ಸಿರವಾರ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸ.21 ರಿಂದ ಅ.20ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಆದರೆ, ಡಿ.20ರ ಸರ್ಕಾರದ ಆದೇಶದ ಪ್ರಕಾರ, ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ, ಡಿ.26 ರಿಂದ 2025ರ ಜ.5ರ ವರೆಗೆ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ನಲ್ಲಿ ಇಲಾಖೆಯ ವತಿಯಿಂದ ಅವಕಾಶ ಕಲ್ಪಿಸಲಾಗಿದೆ.
ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ, ತಮ್ಮ ಅರ್ಜಿಗಳನ್ನು ಡಿ.26ರಿಂದ ಜ.5ರ ಸಂಜೆ 5:30 ರವರೆಗೆ ಪೂರ್ಣಗೊಳಿಸಲು ಅವಕಾಶವಿದೆ ಎಂದು ಸಿರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story







