ರಾಯಚೂರು | ನ್ಯಾ.ಎಚ್.ಎ.ಸಾತ್ವಿಕ್ ಅವರಿಂದ ಬಿತ್ತಿ ಪತ್ರಗಳ ಬಿಡುಗಡೆ

ರಾಯಚೂರು : ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮತ್ತು ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಯು ಸೆ.15 ರಂದು ಪ್ರಾರಂಭವಾಗುವ ಹಿನ್ನಲೆಯಲ್ಲಿ ಗುರುವಾರ ನಗರದ ಜಿಲ್ಲಾ ನ್ಯಾಲಯಾಲಯದ ಆವರಣದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಅವರು ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನವೀನ್ ಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಯಚೂರು ಅಭಿವೃದ್ಧಿ ಅಧಿಕಾರಿ ಚಾಮರಾಜ, ದೇವದಾಸಿ ಪುನರ್ವಸತಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಾಗರಾಜ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟೇಶ ಸೇರಿದಂತೆ ಇತರರು ಇದ್ದರು.
Next Story





