ರಾಯಚೂರು | ಎ.29 ರಂದು ರಂಗಮಂದಿರದಲ್ಲಿ ಬೀದಿಬದಿ ವ್ಯಾಪಾರಿಗಳ ಸಮಾಲೋಚನಾ ಸಭೆ

ರಾಯಚೂರು : ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾ ಸಮಿತಿಯಿಂದ ಎ.26ರಂದು ಬೆಳಗ್ಗೆ 11 ಗಂಟೆಗೆ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೀದಿಬದಿ ವ್ಯಾಪಾರಿಗಳ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯೇಸುಮಿತ್ರ ತಿಳಿಸಿದರು.
ಅವರಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರದಲ್ಲಿ ಫುಟ್‍ಪಾತ್‍ಗಳಲ್ಲಿ ವ್ಯಾಪಾರ ಮಾಡಿಕೊಂಡಿರುವರಿಗೆ ತೆರವು ಮಾಡಲಾಗುತ್ತಿದೆ. ಸೂಕ್ತ ಸ್ಥಳ ಗುರುತಿಸಿದರೆ ನಾವು ವ್ಯಾಪಾರ ಮಾಡಿಕೊಂಡಿರುತ್ತೇವೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಡಾ.ಶರಣಪ್ರಕಾಶ್ ಪಾಟೀಲ್ ಉದ್ಘಾಟಿಸಲಿದ್ದು, ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಸಿ.ಈ.ರಂಗಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಡಾ.ಶಿವರಾಜ್ ಪಾಟೀಲ್, ಎ.ವಸಂತ ಕುಮಾರ, ಸಂಸದ ಜಿ.ಕುಮಾರ ನಾಯಕ, ಬಸನಗೌಡ ದದ್ದಲ್, ವಸಂತ ಕುಮಾರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಜಿಲ್ಲೆಯ ಎಲ್ಲ ಬೀದಿ ಬದಿ ವ್ಯಾಪಾರಿಗಳು ಸಭೆಗೆ ಬರಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಸೈಯದ್, ಗೋಪಿನಾಥ ಉಪಸ್ಥಿತರಿದ್ದರು.







